ಬ್ರೇಕಿಂಗ್ ನ್ಯೂಸ್
15-11-25 07:42 pm Mangalore Correspondent ಕರಾವಳಿ
ಮಂಗಳೂರು, ನ.15 : ಉಳ್ಳಾಲ ಠಾಣೆ ವ್ಯಾಪ್ತಿಯ ಕುಂಪಲದಲ್ಲಿ ವ್ಯಕ್ತಿಯೊಬ್ಬರು ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಎಚ್ಚತ್ತುಕೊಂಡ ಮಂಗಳೂರು ಮಹಾನಗರ ಪಾಲಿಕೆಯು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಆಯಾ ಭಾಗದ ಸ್ಥಳೀಯಾಡಳಿತಕ್ಕೆ ತಿಳಿಸಬೇಕು ಎಂದು ಸೂಚನೆ ನೀಡಿದೆ.
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ.
ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ, ಬೀದಿ ನಾಯಿಗಳಿಗೆ ಆಹಾರ ನೀಡುವ ತಾಣ ಗುರುತಿಸುವುದು, ಸುಪ್ರೀಂ ಕೋರ್ಟ್ ಕಾನೂನು ಪಾಲನೆ ಕುರಿತಾಗಿ ಚರ್ಚಿಸಲು ಮಹಾನಗರ ಪಾಲಿಕೆಯಲ್ಲಿ ನ.23ರಂದು ಬೆಳಗ್ಗೆ 11 ಗಂಟೆಗೆ ಸಭೆ ಕರೆದಿದ್ದು ನಾಯಿಗಳಿಗೆ ಆಹಾರ ನೀಡುವವರು, ಪ್ರಾಣಿ ಪ್ರಿಯರು ಭಾಗವಹಿಸಲು ಪಾಲಿಕೆ ಆಯುಕ್ತರು ಕೋರಿದ್ದಾರೆ.
ಟ್ರಾನ್ಸ್ ಜೆಂಡರ್ ಸಮೀಕ್ಷೆ ; ಕಡ್ಡಾಯ ಮಾಹಿತಿ ಒದಗಿಸಲು ಸೂಚನೆ
ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್‍ಜೆಂಡರ್) ಸಮೀಕ್ಷೆಗೆ ಈಗಾಗಲೇ ಚಾಲನೆ ನೀಡಿದ್ದು, ನವೆಂಬರ್ 21ರ ವರೆಗೆ (ರಜಾದಿನ ಹೊರತುಪಡಿಸಿ) ಬೆಳಗ್ಗೆ 9ರಿಂದ ಸಂಜೆ 6 ರ ವರೆಗೆ ಜಿಲ್ಲೆಯ ವೆನ್‍ಲಾಕ್ ಆಸ್ಪತ್ರೆ, ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ, ಪುತ್ತೂರು/ಬೆಳ್ತಂಗಡಿ/ಸುಳ್ಯ ತಾಲೂಕು ಆಸ್ಪತ್ರೆಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ.
ಟ್ರಾನ್ಸ್‍ಜೆಂಡರ್ಸ್ ಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಮಾಹಿತಿ ಅಗತ್ಯವಾಗಿರುವುದರಿಂದ ಸಮೀಕ್ಷೆ ಪೂರ್ಣಗೊಳ್ಳಲು ಕೇವಲ 9 ದಿನ ಬಾಕಿ ಉಳಿದಿರುವುದರಿಂದ ಸಮೀಕ್ಷೆಗೆ ಒಳಗಾಗದ ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್‍ಜೆಂಡರ್) ಸಮುದಾಯದ ವ್ಯಕ್ತಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಿ ಮಾಹಿತಿಗಳನ್ನು ಒದಗಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 9480155501 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Following the death of a man in a street dog attack at Kumpala under Ullal Police Station limits, the Mangaluru City Corporation has issued strict directions to all private and government educational institutions, hospitals, sports complexes, bus stands, and railway stations.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm