ಬ್ರೇಕಿಂಗ್ ನ್ಯೂಸ್
15-11-25 10:47 pm Mangalore Correspondent ಕರಾವಳಿ
ಬೆಳ್ತಂಗಡಿ, ನ.15 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟ ಆರೋಪದ ಕುರಿತು ಮತ್ತು 20 ವರ್ಷಗಳಿಂದ ನಡೆದಿರುವ ಅಸಹಜ ಪ್ರಕರಣದ ತನಿಖೆಗಾಗಿ ರಚನೆಗೊಂಡಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೌಜನ್ಯಾ ಪರ ಹೋರಾಟಗಾರ ಟಿ. ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಎಸ್ಪಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್ ಸ್ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ಅವರು ಉದ್ದೇಶಿತ ತನಿಖೆ ಮಾಡುವ ಬದಲು ಹೋರಾಟಗಾರರ ಮೇಲೆ ಕಿರುಕುಳ ನೀಡಿದ್ದಾರೆ, ಸೆ.5ರಿಂದ 13ರ ವರೆಗೆ ಗಿರೀಶ್ ಮಟ್ಟೆಣ್ಣವರ್, ಅಭಿಷೇಕ್, ವಿಠಲ ಗೌಡ ಮತ್ತು ತನಗೆ 8-10 ನೋಟಿಸ್ ನೀಡಿ ಠಾಣೆಗೆ ಕರೆಸಿ ವಿನಾಕಾರಣ ಕಿರುಕುಳ ನೀಡಿದ್ದಾರೆ, ಚಿನ್ನಯ್ಯನ ಮೂಲಕ ತನ್ನ ಮೇಲೆ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ, ಸಿಸಿಟಿವಿ ಇಲ್ಲದ ಕೋಣೆಗೆ ಕರೆದೊಯ್ದು ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ, ದೊಡ್ಡವರ ವಿರುದ್ಧ ದೂರು ಕೊಟ್ಟಿದ್ದೀಯಾ, ನಿನ್ನನ್ನು ಜೈಲಿಗೆ ಕಳಿಸದೇ ಬಿಡುವುದಿಲ್ಲ ಎಂದು ಪದೇ ಪದೇ ಹೇಳಿ ಬೆದರಿಕೆ ಹಾಕಿದ್ದಾರೆ, ರಾತ್ರಿ ವರೆಗೂ ತನ್ನ ಪತ್ನಿ, ಮಕ್ಕಳನ್ನು ಕರೆಸಿ ಠಾಣೆಯಲ್ಲಿ ಕೂರಿಸಿ ಸುಳ್ಳು ಹೇಳಿಕೆ ಪಡೆದಿದ್ದಾರೆ ಇತ್ಯಾದಿ ಆರೋಪಗಳನ್ನು ಹೊರಿಸಿ ದೂರು ನೀಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಕಾನೂನುಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ.
A complaint has been filed at the Dharmasthala Police Station against officers of the Special Investigation Team (SIT), which was formed to probe the alleged burial of hundreds of bodies and the 20-year-old mysterious incidents in Dharmasthala village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm