ಬ್ರೇಕಿಂಗ್ ನ್ಯೂಸ್
19-11-25 10:46 pm Mangalore Correspondent ಕರಾವಳಿ
ಉಳ್ಳಾಲ, ನ.19 : ನಾರಾಯಣ ಗುರುಗಳು ಮತ್ತು ಮಹಾತ್ಮ ಗಾಂಧೀಜಿಯವರ ಸಂವಾದದ ಶತಮಾನೋತ್ಸವ ಮತ್ತು ಶ್ರೀ ನಾರಾಯಣ ಗುರುಗಳ ಮಹಾ ನಿರ್ವಾಣ ಶತಮಾನೋತ್ಸವದ ಅಂಗವಾಗಿ ವರ್ಕಳ ಶಿವಗಿರಿ ಮಠ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಆಶ್ರಯದಲ್ಲಿ ಕೊಣಾಜೆ ಮಂಗಳೂರು ವಿವಿಯ ಮೈದಾನದಲ್ಲಿ ಡಿ.03 ರಂದು ನಡೆಯಲಿರುವ ಶತಮಾನದ ಮಹಾ ಪ್ರಸ್ಥಾನ ನಾರಾಯಣ ಗುರು-ಗಾಂಧೀಜಿ "ಸಂವಾದ ಶತಾಬ್ಧಿ" ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಳ್ಳಲಿದ್ದು ಆ ಪ್ರಯುಕ್ತ ಕೊಣಾಜೆ ವಿವಿ ಮೈದಾನದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಕಾರ್ಯಕ್ರಮದ ಲಾಂಛನವನ್ನು ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಖಾದರ್ ಅವರು ಅಂದು ನಾರಾಯಣ ಗುರುಗಳು ಮತ್ತು ಗಾಂಧೀಜಿಯವರು ನಡೆಸಿದ ಸಂವಾದ ಮಹತ್ವ ಪಡೆದಂತೆ ಇಲ್ಲಿ ನಡೆಯುವ ಕಾರ್ಯಕ್ರಮವು ಭವಿಷ್ಯದ ಅತ್ಯುತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆಯಾಗಲಿರುವುದಲ್ಲದೆ, ಇತಿಹಾಸ ನಿರ್ಮಿಸಬಲ್ಲ ದೊಡ್ಡ ಮಟ್ಟದ ಕಾರ್ಯಕ್ರಮ ಇದಾಗಲಿದೆ.ಹಿಂದೆ ದೇಶದ ಪರಿಸ್ಥಿತಿಯೇ ಬೇರೆ ಇದ್ದು,ಆ ಸಮಯದಲ್ಲಿ ನಾರಾಯಣ ಗುರುಗಳು ಮತ್ತು ಗಾಂಧೀಜಿಯವರ ಭೇಟಿ ಮಹತ್ವದಾಗಿತ್ತು.ಬಡವರ,ಹಿಂದುಳಿದವರ ಮಕ್ಕಳು ಶಾಲೆಗೆ ಹೋಗುವ ಪರಿಸ್ಥಿತಿ ಅಂದು ಇರಲಿಲ್ಲ.ಇಂದು ಬಡವರ ಮಕ್ಕಳು ಶಾಲೆಗೆ ಹೋಗುತ್ತಿರುವುದು ಗಾಂಧಿ ಮತ್ತು ಗುರುಗಳು ಸಮಾಜಕ್ಕೆ ಕೊಟ್ಟ ಕೊಡುಗೆಯಾಗಿದೆ.





ಈಗಾಗಲೇ ಇಟಲಿಯ ರೋಮಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ಪೋಪ್ ಉದ್ಘಾಟಿಸಿದ್ದರೆ, ರಾಷ್ಟ್ರೀಯ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಇದೀಗ ಕೊಣಾಜೆಯ ಮಣ್ಣಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯುತ್ತಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಗಾಂಧೀಜಿ ಮತ್ತು ನಾರಾಯಣ ಗುರುಗಳು ದೇಶದ ಸಂಪತ್ತಾಗಿದ್ದಾರೆಯೇ ಹೊರತು ಅವರು ಯಾರೊಬ್ಬರ ಸೊತ್ತು ಆಗಿಲ್ಲ.ಸಂವಾದ ಶತಾಬ್ಧಿ ಕಾರ್ಯಕ್ರಮ ಯಶಸ್ಸಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು.ಸಾಮಾಜಿಕ ನ್ಯಾಯ, ಸಮಾನ ಬದುಕು, ಸಂವಿಧಾನದ ಮಹತ್ವ ಪಸರಿಸುವ ಕಾರ್ಯಕ್ರಮ ಇದಾಗಿದೆ ಎಂದರು.
ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ,ತಿರುವನಂತಪುರ ಶಿವಗಿರಿ ಮಠದ ಜ್ಞಾನತೀರ್ಥ ಸ್ವಾಮೀಜಿ,ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್,ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ಕಾರ್ಯಕ್ರಮ ಉಸ್ತುವಾರಿಗಳಾದ ರಕ್ಷಿತ್ ಶಿವರಾಮ್, ಪಿ.ವಿ.ಮೋಹನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.
To commemorate 100 years of the historic dialogue between Sri Narayana Guru and Mahatma Gandhi, and also to mark the centenary of Sri Narayana Guru’s Mahasamadhi, a state-level event titled “Narayana Guru–Gandhiji Dialogue Centenary” will be held on December 3 at the Mangalore University Grounds in Konaje. The programme is being organized jointly by the Varkala Sivagiri Math and the Sri Narayana Guru Study Chair of Mangalore University.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm