ಬ್ರೇಕಿಂಗ್ ನ್ಯೂಸ್
20-11-25 01:42 pm Udupi Correspondent ಕರಾವಳಿ
ಉಡುಪಿ, ನ 20 : ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು.
ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ.
ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ ಪಾತ್ರ ನಿರ್ವಹಿಸಿದ್ದರು. ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೂರು ದಶಕಗಳ ಕಾಲ ಕಲಾಸೇವೆ:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯವರಾದ ಈಶ್ವರ ಗೌಡರು ಶಿವರಾಜಪುರ, ಮೇಗರವಳ್ಳಿ, ಮಡಾಮಕ್ಕಿ, ಅಮೃತೇಶ್ವರಿ, ಮಂದಾರ್ತಿ ಮೇಳಗಳಲ್ಲಿ ಸುಮಾರು ಮೂರು ದಶಕಗಳಿಂದ ಕಲಾಸೇವೆ ಮಾಡುತ್ತಾ ಬಂದಿದ್ದರು. ಪೌರಾಣಿಕ ಪುರುಷ ಪಾತ್ರಗಳನ್ನು ಸಮರ್ಥವಾಗಿ ರಂಗದಲ್ಲಿ ಪ್ರಸ್ತುತಗೊಳಿಸಿ ಕಲಾಸಿದ್ಧಿ ಪಡೆದಿದ್ದರು.
ಅಂತ್ಯಸಂಸ್ಕಾರ ಇಂದು ಶೃಂಗೇರಿ ಸಮೀಪದ ನೆಮ್ಮಾರು ಗ್ರಾಮದ ಬುಕ್ಡಿಬೖಲಿನಲ್ಲಿ ಜರುಗಲಿದೆ. ಮಂದಾರ್ತಿ ಮೇಳದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ಸಂತಾಪ ಸೂಚಿಸಿದ್ದಾರೆ.
A tragic incident occurred in Udupi district on Wednesday night, where a Yakshagana performer passed away after suffering a heart attack. The deceased has been identified as Ishwara Gowda (51), an artist from the Mandarti Mela. He was performing the role of Mahishasura in the Devi Mahatme episode of the Mandarti Second Mela. Shortly after completing his role and while removing his costume, he suddenly collapsed.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am