ಬ್ರೇಕಿಂಗ್ ನ್ಯೂಸ್
21-11-25 09:55 pm Mangalore Correspondent ಕರಾವಳಿ
ಮಂಗಳೂರು, ನ.21 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು- ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮ ದೊಡ್ಡ ಫಲ ನೀಡಿದೆ.
ಹೆದ್ದಾರಿ ಪ್ರಾಧಿಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರಿನ ಅತ್ಯಂತ ನಿರ್ಣಾಯಕ ರಸ್ತೆ ಕಾರಿಡಾರ್‌ಗಳಲ್ಲಿ ಒಂದಾದ ಸುರತ್ಕಲ್- ನಂತೂರು- ಬಿಸಿ.ರೋಡ್ ಹೆದ್ದಾರಿಯ ಸಮರ್ಪಕ ನಿರ್ವಹಣೆ ಮತ್ತು ಸುಧಾರಣೆಗೆ ಕಾಯಕಲ್ಪ ದೊರೆಯುವ ಮೂಲಕ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ನಿರೀಕ್ಷೆಯಿದೆ.
ಮಂಗಳೂರಿನ ಈ ಬಂದರು ಸಂಪರ್ಕ ಹೆದ್ದಾರಿ ತೀರಾ ಹದಗೆಟ್ಟಿದ್ದು ಸರಕು ವಾಹನ ಹಾಗೂ ದೈನಂದಿನ ವಾಹನಗಳ ಓಡಾಟಕ್ಕೆ ಸಾಕಷ್ಟು ತೊಂದರೆ ಎದುರಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸಂಸದ ಕ್ಯಾ. ಚೌಟ ಅವರು ಕಳೆದೊಂದು ವರ್ಷದಿಂದ ಸುರತ್ಕಲ್-ಮಂಗಳೂರು -ಬಿಸಿರೋಡ್ ವರೆಗಿನ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ಹಸ್ತಾಂತರಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿದ್ದರು. ಸುರತ್ಕಲ್- ನಂತೂರು- ಬಿಸಿ ರೋಡ್ ರಸ್ತೆಯು ಪ್ರಸ್ತುತ ವಿಶೇಷ ಉದ್ದೇಶದ ಘಟಕವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್(ಎನ್‌ಎಚ್‌ಎಲ್‌ಎಂಎಲ್) ವ್ಯಾಪ್ತಿಗೆ ಬರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು, ನಿಧಿಯ ಕೊರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಹೆದ್ದಾರಿ ದುಸ್ಥಿತಿಗೆ ಪ್ರಮುಖ ಕಾರಣವಾಗಿತ್ತು. ಈ ಬಗ್ಗೆ ಗಂಭೀರ ಕ್ರಮ ವಹಿಸಿದ್ದ ಕ್ಯಾ. ಚೌಟ ಅವರು ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಮುಂದಾಗಿದ್ದರು.
ಅದರಂತೆ 2024ರ ಜುಲೈ 23ರಂದು ಹೆದ್ದಾರಿ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿನಯ್ ಕುಮಾರ್ ಅವರನ್ನು ಭೇಟಿ ಮಾಡಿ, ಸುರತ್ಕಲ್ -ಬಿ.ಸಿ. ರೋಡ್ ರಸ್ತೆಯಲ್ಲಿ ಭಾರೀ ಸರಕು ಸಾಗಾಟ, ಸರ್ವಿಸ್ ರಸ್ತೆಯ ಕೊರತೆ, ಅಪಘಾತ ವಲಯಗಳು, ಅಸಮರ್ಪಕವಾಗಿರುವ ಒಳಚರಂಡಿ ಇತ್ಯಾದಿ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ಮನವಿ ಸಲ್ಲಿಸಿದ್ದರು. ಈ ಆರಂಭಿಕ ಮಧ್ಯಸ್ಥಿಕೆಯು ಈ ಮಾರ್ಗದ ಸುಧಾರಣೆಗಾಗಿ ₹28.58 ಕೋಟಿ ಅನುದಾನ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿತ್ತು.
ಈ ನಡುವೆ ಕ್ಯಾ. ಚೌಟ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಹಲವು ಸಂದರ್ಭದಲ್ಲಿ ಭೇಟಿ ಮಾಡಿ ಬಂದರು ವ್ಯಾಪ್ತಿಯ ಈ ಹೆದ್ದಾರಿಯನ್ನು ಎನ್‌ಎಚ್‌ಎಲ್‌ಎಂಎಲ್‌ನಿಂದ ಎನ್‌ಎಚ್‌ಎಐಗೆ ಹಸ್ತಾಂತರಿಸುವುದಕ್ಕೆ ಮನವಿ ಮಾಡಿದ್ದರು. ಕಳೆದ ಜೂ.26ರಂದು ಸಚಿವರಿಗೆ ಈ ಬಗ್ಗೆ ಮನವಿ ಪತ್ರ ಸಲ್ಲಿಸಿದ್ದರು. ಇದಾದ ಬಳಿಕ ಕಳೆದ ಮುಂಗಾರು ಅಧಿವೇಶನದಲ್ಲಿ ಮತ್ತೊಮ್ಮೆ ಸಚಿವ ನಿತಿನ್ ಗಡ್ಕರಿಯವರನ್ನು ಖುದ್ದು ಭೇಟಿಯಾಗಿ, ಈ ಹೆದ್ದಾರಿ ವ್ಯಾಪ್ತಿಯನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ನೀಡುವುದರಿಂದ ಮಂಗಳೂರು ಬಂದರು ಕಾರ್ಯ ಚಟುವಟಿಕೆಗಳಿಗೆ ಹೇಗೆ ಅನುಕೂಲವಾಗಲಿದೆ ಮತ್ತು ಕರಾವಳಿ ಭಾಗದ ಸರಕು ಸಾಗಣೆ ಜಾಲದಲ್ಲಿ ಗಮನಾರ್ಹ ಸುಧಾರಣೆ ತರಬಹುದೆಂದು ಮನವರಿಕೆ ಮಾಡಿದ್ದರು.
ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿರುವ ಸಚಿವಾಲಯವು, ಆದಷ್ಟು ಬೇಗ ಸುರತ್ಕಲ್- ಬಿಸಿ ರೋಡ್ ಹೆದ್ದಾರಿ ಸುಧಾರಣೆ ಹಾಗೂ ರಸ್ತೆ ಸುರಕ್ಷತೆ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವಂತೆ ಸೂಚಿಸಿದೆ. ಅಲ್ಲದೆ, ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ಕಾರಿಡಾರ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆ ತಡೆ, ಸವಾಲು ಹಾಗೂ ಬಲವರ್ಧನೆಗೆ ಕ್ರಮ ಕೈಗೊಳ್ಳುವ ಮೂಲಕ ಶಾಶ್ವತ ಪರಿಹಾರ ಒದಗಿಸುವಂತೆ ಸೂಚಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು, ಸುರತ್ಕಲ್-ನಂತೂರು- ಬಿಸಿ ರೋಡ್ ಹೆದ್ದಾರಿಯನ್ನು ಎನ್‌ಎಚ್‌ಎಲ್‌ಎಂಎಲ್‌ನಿಂದ ಎನ್‌ಎಚ್‌ಎಐಗೆ ಹಸ್ತಾಂತರಿಸಿ ಆದೇಶ ಹೊರಡಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಎಲ್ಲ ಅಧಿಕಾರಿ ವರ್ಗದವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ದಕ್ಷಿಣ ಕನ್ನಡದಲ್ಲಿ ಸರಕು ಸುಧಾರಣೆ ಹಾಗೂ ಜಿಲ್ಲೆಯ ಆರ್ಥಿಕ ಚಟುವಟಿಕೆ ಬಲವರ್ಧನೆಗೆ ಇದೊಂದು ಐತಿಹಾಸಿಕ ನಿರ್ಧಾರ. ಈ ಹೆದ್ದಾರಿಯನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಹಸ್ತಾಂತರಿಸಬೇಕೆಂಬುದು ಹಲವು ವರ್ಷಗಳ ಬಹಳ ದೊಡ್ಡ ಬೇಡಿಕೆಯಾಗಿತ್ತು. ಆದರೆ, ಸಂಸದನಾದ ಬಳಿಕ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಪ್ರಯತ್ನ ನಡೆಸುತ್ತಿದ್ದೆ. ನಮ್ಮ ಈ ನಿರಂತರ ಪರಿಶ್ರಮಕ್ಕೆ ಬಹುದೊಡ್ಡ ಯಶಸ್ಸು ಸಿಕ್ಕಿದೆ. ಹೆದ್ದಾರಿಯನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಸುವುದರಿಂದ ಈ ರಸ್ತೆಯನ್ನು ಬಳಸುವ ದೈನಂದಿನ ಪ್ರಯಾಣಿಕರು, ಉದ್ದಿಮೆದಾರರಿಗೆ ಹೆಚ್ಚಿನ ಅನುಕೂಲವಾಗುವ ಜತೆಗೆ ಎನ್‌ಎಂಪಿಟಿ ಬಂದರಿನ ಪರಿಸರ ವ್ಯವಸ್ಥೆ ಮತ್ತಷ್ಟು ಸುಧಾರಿಸುವುದಕ್ಕೆ ಸಹಕಾರಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
The Union Ministry of Road Transport and Highways has approved the transfer of the Surathkal–Nanthur–BC Road stretch—currently under the jurisdiction of the New Mangalore Port Trust (NMPT)—to the National Highways Authority of India (NHAI).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm