ಬ್ರೇಕಿಂಗ್ ನ್ಯೂಸ್
21-11-25 10:03 pm Mangalore Correspondent ಕರಾವಳಿ
ಮಂಗಳೂರು, ನ.21 : ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ 'ನಮೋ ಚೆಸ್ ಟೂರ್ನಮೆಂಟ್' ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ.
ಈಗಾಗಲೇ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು 500ಕ್ಕೂ ಹೆಚ್ಚು ಆಸಕ್ತರಿಂದ ನೋಂದಾವಣೆಯಾಗಿದ್ದು, ಸಬ್ ಜ್ಯೂನಿಯರ್ (U-10) Boys & Girls , ಜ್ಯೂನಿಯರ್ (U-15) Boys & Girls , ಓಪನ್ ಕೆಟಗರಿ ಈ ಮೂರು ವಿಭಾಗದಲ್ಲಿ ಟೂರ್ನಮೆಂಟ್ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಅಂದು ಬೆಳಗ್ಗೆ 8ಕ್ಕೆ ತಪ್ಪದೇ ಕಡ್ಡಾಯವಾಗಿ ಹೆಸರು ನೋಂದಾಯಿಸಬೇಕಾಗಿದ್ದು, 8.30ಕ್ಕೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ 'ಫಿಟ್ ಯುವ' ಪರಿಕಲ್ಪನೆಯಡಿ ಈ ಕ್ರೀಡಾ ಮಹೋತ್ಸವ ಆಯೋಜಿಸಲಾಗಿದೆ. ನ.23ರ ಬಳಿಕ ಪ್ರತಿ ವಾರವು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ವಾಲಿಬಾಲ್, ತ್ರೋಬಾಲ್, ಕುಸ್ತಿ, ಕಬಡ್ಡಿ, ಹಗ್ಗ ಜಗ್ಗಾಟ, ಕ್ರಿಕೆಟ್, ಬ್ಯಾಡ್ಮಿಂಟನ್ ಪಂದ್ಯಾಟಗಳನ್ನು ಆಯೋಜಿಸಲಾಗುತ್ತದೆ. ಈ ವಾರ ಚೆಸ್ ಟೂರ್ನಮೆಂಟ್ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳು, ಯುವಕರು ಸೇರಿ ಕ್ರೀಡಾಸಕ್ತರು ಈ ಟೂರ್ನಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ವಿ.ಪ. ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನೀಲ್ ಅಚಾರ್, ಜಿಲ್ಲಾಧ್ಯಕ್ಷೆ ಅಮರಶ್ರೀ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
As part of the nationwide Sansad Khel Mahotsav, the Namo Chess Tournament will be held in Mangaluru on November 23 at the U.S. Mallya Indoor Stadium. Over 500 participants have already registered. The competition will be conducted in three categories: Sub-Junior (U-10) Boys & Girls, Junior (U-15) Boys & Girls, and Open Category.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am