ಬ್ರೇಕಿಂಗ್ ನ್ಯೂಸ್
29-12-20 03:02 pm Mangalore Correspondent ಕರಾವಳಿ
ಮಂಗಳೂರು, ಡಿ.29: ಜನವರಿ 1ರಂದು ತೊಕ್ಕೊಟ್ಟಿನಲ್ಲಿ ನಡೆಸಲು ಉದ್ದೇಶಿಸಿದ್ದ ನೂತನ ಬ್ಯಾರಿ ಅಕಾಡಮಿಯ ಕಚೇರಿ ಹಾಗೂ ಸಾಂಸ್ಕೃತಿಕ ಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಅಬ್ಬಕ್ಕ ಭವನಕ್ಕೆ ಮೀಸಲಾದ ಜಾಗದಲ್ಲೇ ಬ್ಯಾರಿ ಅಕಾಡೆಮಿ ಸಾಂಸ್ಕೃತಿಕ ಭವನ ನಿರ್ಮಾಣವಾಗಲಿದೆ ಎಂದು ಸ್ಥಳೀಯ ಶಾಸಕ ಯು.ಟಿ.ಖಾದರ್ ಪತ್ರಿಕೆಯೊಂದಕ್ಕೆ ನೀಡಿದ ಹೇಳಿಕೆಯಿಂದಾಗಿ ಗೊಂದಲ ಸೃಷ್ಟಿಯಾಗಿದೆ. ಇದರಿಂದ ಅಸಮಾಧಾನಗೊಂಡ ಅಬ್ಬಕ್ಕ ಅಭಿಮಾನಿಗಳು ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬ್ಯಾರಿ ಭವನಕ್ಕೆ ನೀಡಿರುವ ಜಾಗಕ್ಕೂ ಅಬ್ಬಕ್ಕ ಭವನಕ್ಕೆ ನೀಡಿರುವ ಜಾಗಕ್ಕೂ ವ್ಯತ್ಯಾಸ ಇದೆ. ಶಾಸಕರು ಜನರಲ್ಲಿ ಗೊಂದಲ ಎಬ್ಬಿಸಿದ್ದಾರೆ ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಹೇಳಿಕೆ ನೀಡಿ, ಬೆಂಗಳೂರಿನಲ್ಲಿ ಭವನ ನಿರ್ಮಾಣವಾಗಿರುವ ಬಗ್ಗೆ ತಿಳಿಸಿದ್ದಾರೆ. ಆದರೆ, ಬೆಂಗಳೂರಿನಲ್ಲಿರುವ ಭವನ 25 ವರ್ಷಗಳಿಂದ ನನೆಗುದ್ದಿಗೆ ಬಿದ್ದಿದ್ದು ಅದು ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಗೆ ಸೇರಿದ ಖಾಸಗಿ ಭವನ. ನಾವು ಮಾಡಲು ಹೊರಟಿರುವುದು ಸರಕಾರದ ಭವನ. ಸರಕಾರದ ವತಿಯಿಂದ ಅಕಾಡೆಮಿ ನಿರ್ಮಿಸುವುದಕ್ಕೂ ಖಾಸಗಿಯ ಭವನಕ್ಕೂ ವ್ಯತ್ಯಾಸ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಬ್ಬಕ್ಕ ಭವನಕ್ಕೆ ಮೀಸಲಾದ 42 ಸೆಂಟ್ಸ್ ಸ್ಥಳ ಪ್ರತ್ಯೇಕ ಇದೆ. ಬ್ಯಾರಿ ಭವನಕ್ಕೆ ಮೀಸಲಾದ ಜಮೀನಿಗೆ ಯಾವುದೇ ಸಂಬಂಧವಿಲ್ಲ. ಪಕ್ಕದಲ್ಲೇ ಇರುವ ಗ್ರಾಮಕರಣಿಕರು ಮತ್ತು ಸರ್ವೇಯರ್ ಕಚೇರಿಗೆ ಮೀಸಲಿರಿಸಿದ್ದ 25 ಸೆಂಟ್ ಸ್ಥಳದಲ್ಲಿ ಅಕಾಡಮಿಯ ಕಚೇರಿ ಹಾಗೂ ಸಾಂಸ್ಕೃತಿಕ ಭವನ ನಿರ್ಮಿಸಲು ಯೋಜನೆ ಹಾಕಿದ್ದು, ಇದೇ ಕಟ್ಟಡದಲ್ಲಿ ಗ್ರಾಮಕರಣಿಕರ ಹಾಗೂ ಸರ್ವೇಯರ್ ಕಚೇರಿ ತಲೆ ಎತ್ತಲಿದೆ. ಇದನ್ನು ಅಬ್ಬಕ್ಕ ಉತ್ಸವ ಸಮಿತಿಗೆ ಮನವರಿಕೆ ಮಾಡಿದ್ದೇವೆ ಎಂದರು.
ಯಾವುದೇ ಸಮಾಜಕ್ಕೆ ನೋವನ್ನುಂಟು ಮಾಡಿ ಶಿಲಾನ್ಯಾಸ ಕಾರ್ಯಕ್ರಮ ನಡೆಸುವುದು ಸಮಂಜಸವಲ್ಲ ಎಂದು ಭಾವಿಸಿ ಎಲ್ಲರ ಮನ ಒಲಿಸಿ ಅಬ್ಬಕ್ಕ ಭವನಕ್ಕೂ ನ್ಯಾಯ ಒದಗಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿ ಅಕಾಡೆಮಿಯ ಶಿಲಾನ್ಯಾಸ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಹೀಂ ಉಚ್ಚಿಲ್ ಸ್ಪಷ್ಟಪಡಿಸಿದರು.
ಕೆಲವರು ಇದು ಒಂದು ಧರ್ಮೀಯರಿಗೆ ಸೇರಿದ ಭವನವಾಗಲಿದೆ ಎಂಬ ಅಪಪ್ರಚಾರ ನಡೆಸುತ್ತಿದ್ದು, ಇದು ಸತ್ಯಕ್ಜೆ ದೂರವಾಗಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿದಂತೆ ಹಲವು ಅಕಾಡೆಮಿಗಳು ಕನ್ನಡ ಸಂಸ್ಕೃತಿ ಇಲಾಖೆಯ ಅಧೀನದಲ್ಲಿವೆ. ಭಾಷೆ ಕಲೆ ಸಾಹಿತ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದು ಯಾವುದೇ ಧಾರ್ಮಿಕ ಕೆಲಸ ಕಾರ್ಯಗಳಿಗೆ ಉತ್ತೇಜನ ನೀಡುತ್ತಿಲ್ಲ. ಮೂರನೇ ಅಂತಸ್ತಿನಲ್ಲಿ ಗ್ರಾಮಕರಣಿಕರ ಹಾಗೂ ಸರ್ವೇಯರ್ ಕಚೇರಿ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ನೀಲ ನಕ್ಷೆಯನ್ನು ವೀಕ್ಷಿಸ ಬಹುದಾಗಿದೆ ಎಂದು ರಹೀಂ ಉಚ್ಚಿಲ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯರಾದ ರೂಪಾಶ್ರೀ ವರ್ಕಾಡಿ, ರೂಪೇಶ್ ಉಪಸ್ಥಿತರಿದ್ದರು.
The plan for Beary Bhavana in Thokottu has received large Opposition and hence the foundation laying ceremony has been postponed states president Rahim Uchil.
24-11-24 08:39 pm
Bangalore Correspondent
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
Karnataka Bypolls Live Updates Congress: ಉಪ ಚ...
23-11-24 11:35 am
ಲಾರಿ ಡ್ರೈವರ್ ಎಡವಟ್ಟಿಗೆ ಫಾರ್ಚುನರ್ ಕಾರು ಡಿಕ್ಕ...
22-11-24 05:16 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
24-11-24 09:13 pm
Mangalore Correspondent
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
Naxal Vikram Gowda, Murdeshwar, Mangalore: ಪೊ...
24-11-24 03:21 pm
Mangalore, Someshwara Suicide; ಸೋಮೇಶ್ವರ ರುದ್ರ...
24-11-24 01:18 pm
MP Captian Brijesh Chowta, Mangalore: ಐಬಿಆರ್...
23-11-24 10:37 pm
24-11-24 04:33 pm
Bangalore Correspondent
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm
Bangalore crime, Stabbing: ಬೈಕ್ ಪಾರ್ಕಿಂಗ್ ವಿಚ...
22-11-24 04:14 pm