ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ ವರೆಗೆ ಮೋದಿ ರೋಡ್ ಶೋ ; ಪ್ರತಿ ಬೂತಿನಿಂದ ಕೇಸರಿ ಕಾರ್ಯಕರ್ತರು, ಪ್ರಧಾನಿ ಸ್ವಾಗತಕ್ಕೆ 30 ಸಾವಿರ ಜನರ ನಿರೀಕ್ಷೆ 

26-11-25 03:34 pm       Udupi Correspondent   ಕರಾವಳಿ

ನವೆಂಬರ್ 28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ ವರೆಗೆ ರೋಡ್ ಶೋ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಉಡುಪಿ, ನ.26 : ನವೆಂಬರ್ 28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ ವರೆಗೆ ರೋಡ್ ಶೋ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಮಾಹಿತಿ ನೀಡಿದ್ದು, ಬೆಳಗ್ಗೆ 11:40ಕ್ಕೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದು ಉಡುಪಿ- ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿಯ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ರೋಡ್ ಶೋ ನಡೆಸಲಿದ್ದು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ ಎಂದು ಹೇಳಿದ್ದಾರೆ.

ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀಕೃಷ್ಣ ಮಠವನ್ನು ತಲುಪಿ, ಕೃಷ್ಣ ದರ್ಶನ ಪಡೆಯಲಿದ್ದಾರೆ. ನಂತರ "ಲಕ್ಷ ಕಂಠ ಗೀತಾ ಪಾರಾಯಣ"ದಲ್ಲಿ ಭಾಗವಹಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.

PM Modi: India Redefining Global Leadership in Science and Innovation

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ರೋಡ್ ಶೋ ಮಾರ್ಗದಲ್ಲಿ, ಸಾಂಸ್ಕೃತಿಕ ತಂಡಗಳು, ಯಕ್ಷಗಾನ, ಹುಲಿ ನೃತ್ಯ ತಂಡಗಳು ಮತ್ತು ಶ್ರೀಕೃಷ್ಣನ ವೇಷ ಧರಿಸಿದ ಕಲಾವಿದರು ಸೇರಿದಂತೆ ಕರಾವಳಿ ಕರ್ನಾಟಕದ ಕಲಾ ಪ್ರಕಾರಗಳು ಪ್ರದರ್ಶನಗೊಳ್ಳಲಿವೆ. 

ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದ್ದು, ಪ್ರಧಾನಿಯನ್ನು ಸ್ವಾಗತಿಸಲು 30,000 ಕ್ಕೂ ಹೆಚ್ಚು ಜನರು ಸಾಲುಗಟ್ಟಿ ನಿಲ್ಲುವ ನಿರೀಕ್ಷೆಯಿದೆ. ರೋಡ್ ಶೋ ವೀಕ್ಷಣೆ ಮಾಡುವ ಸಮಸ್ತ ನಾಗರಿಕರು ನ.28 ಶುಕ್ರವಾರ ಬೆಳಗ್ಗೆ ಗಂಟೆ 10:30ರೊಳಗೆ ಬನ್ನಂಜೆ-ಕಲ್ಸಂಕ ರಸ್ತೆಯ ಇಕ್ಕೆಲಗಳಲ್ಲಿ ಉಪಸ್ಥಿತರಿರುವಂತೆ ಕೋರಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ 1,112 ಮತಗಟ್ಟೆಗಳ ಪ್ರತೀ ಬೂತ್‌ಗಳಿಂದ ತಲಾ 12 ಮಂದಿಯ ತಂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಬಿಜೆಪಿಯಿಂದ ಆದೇಶಿಸಲಾಗಿದೆ. ಉಡುಪಿ ನಗರ ಭಾಗದಿಂದ ಗರಿಷ್ಠ ಸಂಖ್ಯೆಯ ಜನತೆ ಭಾಗವಹಿಸಲಿದ್ದಾರೆ. 2018ರ ಬಳಿಕ ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ತಿರದಿಂದ ನೋಡುವ ಸದವಕಾಶ ಜಿಲ್ಲೆಯ ಜನತೆಗೆ ಲಭಿಸುತ್ತಿದೆ. ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ. ರಾಘವೇಂದ್ರ, ಕ್ಯಾ. ಬ್ರಿಜೇಶ್ ಚೌಟ ಸಹಿತ ಜಿಲ್ಲೆಯ ಶಾಸಕರು, ರಾಜ್ಯದ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

Prime Minister Narendra Modi will visit Udupi on November 28 and lead a grand roadshow from Bannanje to Kalsanka Junction. According to Udupi BJP District President Kuthyar Naveen Shetty, the Prime Minister will arrive at 11:40 AM and begin the roadshow near the Sri Narayana Guru Circle, passing through the city bus stand route up to Kalsanka Junction.