Mangalore, Udupi, PM Narendra Modi, Krishna Mutt: ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ, ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ 

28-11-25 11:29 am       Mangalore Correspondent   ಕರಾವಳಿ

ಉಡುಪಿ ಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. 

ಮಂಗಳೂರು, ನ.28 :  ಉಡುಪಿ ಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. 

ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನ ಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ,  ಗ್ರೇಟರ್ ಬೆಂಗಳೂರು ಪಾಲಿಕೆ ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್  ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಸ್ವಾಗತಿಸಿದರು. ಬಳಿಕ ಪ್ರಧಾನಮಂತ್ರಿಗಳು, ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಿದರು. ಉಡುಪಿಯಲ್ಲಿ ಬೆಳಗ್ಗೆ 11ರಿಂದ 11.30ರ ವರೆಗೆ ರೋಡ್ ಶೋ ನಡೆಸಲಿದ್ದಾರೆ.

Prime Minister Narendra Modi arrived at Mangaluru International Airport on Friday morning to participate in the program scheduled at Udupi Sri Krishna Mutt. He landed at 10:25 AM in an Indian Air Force aircraft and was officially welcomed by Karnataka Health Minister and Dakshina Kannada district in-charge minister, Dinesh Gundu Rao.