ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದುರ್ವರ್ತನೆ ; ಕೂಡಿಹಾಕಿ ಪೊಲೀಸರ ವಶಕ್ಕೊಪ್ಪಿಸಿದ ಸ್ಥಳೀಯರು, ಅಮಾನತು ಪಡಿಸಿದ ದ.ಕ. ಎಸ್ಪಿ 

06-12-25 06:12 pm       Mangalore Correspondent   ಕರಾವಳಿ

ತಡರಾತ್ರಿ ವೇಳೆ ಅಕ್ರಮವಾಗಿ ಮನೆಯೊಂದಕ್ಕೆ ನುಗ್ಗಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸದ್ರಿ ವ್ಯಕ್ತಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪುತ್ತೂರು, ಡಿ.6 : ತಡರಾತ್ರಿ ವೇಳೆ ಅಕ್ರಮವಾಗಿ ಮನೆಯೊಂದಕ್ಕೆ ನುಗ್ಗಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸದ್ರಿ ವ್ಯಕ್ತಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯ ಸಮೀಪದ ಸಹೋದರ ಹರೀಶ ಗೌಡರ ಮನೆಗೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಈ ವೇಳೆ ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದರು. ಆದರೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ.

ಈ ವೇಳೆ ವ್ಯಕ್ತಿಯನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ ರಾಜು ನಾಯ್ಕ ಎಂಬುದಾಗಿ ತಿಳಿದು ಬಂದಿತ್ತು. ರಾಜು ನಾಯ್ಕ ತಡರಾತ್ರಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರೋಪಿ ರಾಜು ನಾಯ್ಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಕ್ಷಣದಿಂದಲೇ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್‌ ಪ್ರಕಟಣೆ ತಿಳಿಸಿದೆ.

A head constable from the Kadaba Police Station, Raju Naik, was arrested after he allegedly illegally entered a house late at night and assaulted a family member. The incident took place in Koyila, Kadaba taluk.