ಬ್ರೇಕಿಂಗ್ ನ್ಯೂಸ್
10-12-25 11:04 pm Mangalore Correspondent ಕರಾವಳಿ
ಪುತ್ತೂರು, ಡಿ.10 : ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಹಿರಿಯ ಮುಖಂಡ ಪ್ರಭಾಕರ್ ಭಟ್ ಅವರಿಗೆ ನಾಲ್ಕು ತಿಂಗಳ ವಿಚಾರಣೆ ಬಳಿಕ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ಪುತ್ತೂರು ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಉತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಿಸಿದ ಪೊಲೀಸರಿಗೆ ಬಂಧನ ಮಾಡದಂತೆ ಹೈಕೋರ್ಟಿನಲ್ಲಿ ತಡೆಯಾಜ್ಞೆ ತರಲಾಗಿತ್ತು.
ಆನಂತರ ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆ.ಜೆ ಮಹೇಶ್ ವಾದ ಮಂಡಿಸಿದ್ದರು.
RSS senior leader Prabhakar Bhat has been granted bail by the 5th Additional District and Sessions Court, Puttur on Wednesday, following nearly four months of legal proceedings in a hate speech case.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm