ಬ್ರೇಕಿಂಗ್ ನ್ಯೂಸ್
11-12-25 04:21 pm Mangalore Correspondent ಕರಾವಳಿ
ಮಂಗಳೂರು, ಡಿ.11 : ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣಾರ ಹೀಗೆ ವಿವಿಧ ವರ್ಗಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವರಿದ್ದು, ದೈವದ ಚಾಕರಿ ಮಾಡುವವರಲ್ಲಿಯೂ ಅನೇಕ ವರ್ಗಗಳಿವೆ. ಸರ್ಕಾರ ಇದನ್ನು ಬಹಳ ಸೂಕ್ಷ್ಮವಾಗಿ ಅರ್ಥೈಸಿಕೊಂಡು ಆಯಾ ಹೆಸರುಗಳನ್ನೇ ಉಲ್ಲೇಖಿಸಬೇಕು ಹೊರತು ಸಾಹಿತಿಗಳು, ಕಲಾವಿದರು, ಲಲಿತ ಕಲೆ, ಶಿಲ್ಪ ಕಲೆ, ಮೊದಲಾದ ಸಾಲಿಗೆ ಸೇರಿಸಬಾರದು. 40 ವರ್ಷಕ್ಕಿಂತ ಕಡಿಮೆ ಹಾಗೂ 58 ವರ್ಷಕ್ಕಿಂತ ಮೇಲ್ಪಟ್ಟ ಅನೇಕರು ಸಹ ದೈವಾರಾಧನೆಯಲ್ಲಿ ತೊಡಗಿಕೊಂಡಿದ್ದು ಅವರಿಗೂ ಅನುಕೂಲವಾಗುವ ಮಾನದಂಡಗಳನ್ನು ರೂಪಿಸಬೇಕು ಎಂದರು.
ನಲಿಕೆ ಸಮುದಾಯದ ಕೇವಲ ಮೂರು ಜನರಿಗೆ ಮಾಶಾಸನ ನೀಡಲಾಗುತ್ತಿದೆ ಎಂದು ಸರಕಾರ ಅಧಿವೇಶನದಲ್ಲಿ ಉತ್ತರ ನೀಡಿದ್ದು, ನಮ್ಮ ಜಿಲ್ಲೆಯಲ್ಲಿ ದೈವಾರಾದನೆ ಚಾಕರಿಯಲ್ಲಿ ತೊಡಗಿರುವವರ ಸಂಖ್ಯೆ ಬಹಳಷ್ಟಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಅವರಿಗೆ ಪಿಎಫ್, ಇಎಸ್ಐ, ಸೇರಿದಂತೆ ಯಾವುದೇ ಸೌಲಭ್ಯಗಳು ಇಲ್ಲವಾಗಿದ್ದು ಅವರ ಆದಾಯ ಹೆಚ್ಚುಗೊಳಿಸುವುದು, ಅವರೆಲ್ಲರಿಗೂ ಪ್ರತಿ ತಿಂಗಳು ಎರಡೂವರೆ ಸಾವಿರ ಮಾಸಾಶನ, ಬೇರೆ ರಾಜ್ಯಗಳಿಂದ ಮದುವೆಯಾಗಿ ಬಂದಾಗ ಜಾತಿ ಪ್ರಮಾಣ ಪತ್ರ ಪಡೆಯುವಲ್ಲಿ ಆಗುತ್ತಿರುವ ತಾರತಮ್ಯ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.
MLA Vedavyas Kamath urged the state government to immediately extend support to the various communities in Tulunadu who are engaged in Daiva worship and related traditional service, stating that many of them are facing severe hardships. He raised the issue during the ongoing legislative session in Belagavi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm