ಬ್ರೇಕಿಂಗ್ ನ್ಯೂಸ್
16-12-25 01:23 pm Mangalore Correspondent ಕರಾವಳಿ
ಉಳ್ಳಾಲ, ಡಿ.16 : ಮನೆಯ ಹಿಂದಿನ ಆವರಣ ಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ ವಲಸೆ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನ ಕೂಳೂರಿನಲ್ಲಿ ವಾಸವಾಗಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ (35) ಮೃತ ವ್ಯಕ್ತಿ. ಸೇವಂತಿಗುತ್ತುವಿನ ಗೌತಮ್ ರಾಜ್ ಎಂಬವರ ಮನೆಯ ಹಿಂಭಾಗದಲ್ಲಿ ಕಳೆದ ಮಳೆಗಾಲದಲ್ಲಿ ಎತ್ತರ ಪ್ರದೇಶದ ಗುಡ್ಡದ ಮಣ್ಣು ಕುಸಿತವಾಗಿತ್ತು. ಗೌತಮ್ ರಾಜ್ ಅವರು ಕೆಲ ದಿನಗಳ ಹಿಂದಷ್ಟೆ ಮನೆಯ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದರು.







ಮಂಗಳವಾರ ಜೆಸಿಬಿ ಸಹಿತ ವಲಸೆ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ, ಶಿವು ಎಂಬವರು ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಮನೆಯ ಹಿಂಭಾಗದ ಎತ್ತರದ ಗುಡ್ಡದ ಮಣ್ಣು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ ಮಣ್ಣಿನಡಿ ಸಿಲುಕಿದ್ದಾರೆ. ಹನುಮಂತ ಮತ್ತು ಭೀಮಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದು, ಮಣ್ಣಿನಡಿ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಳಪ್ಪನನ್ನ ಸ್ಥಳೀಯರು ಹರಸಾಹಸ ಪಟ್ಟು ಹೊರ ತೆಗೆದರೂ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಎಸ್ಡಿಆರ್ ಎಫ್, ಅಗ್ನಿಶಾಮಕ ದಳ, ಎಸಿಪಿ ವಿಜಯಕ್ರಾಂತಿ, ಉಳ್ಳಾಲ ಪೊಲೀಸ್ ನಿರೀಕ್ಷರಾದ ವಿರೂಪಾಕ್ಷ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಳಪ್ಪ ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
A migrant labourer lost his life after being buried under soil when a mound collapsed during compound wall construction at Sevanthiguttu near Kallapu in Ullal on Tuesday morning. The deceased has been identified as Balappa (35), a native of Hanumakatte in Hungund taluk of Bagalkote district, who was residing in Kuloor, Mangaluru. The incident occurred while construction work was underway behind a house, where soil from an elevated mound suddenly gave way.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm