ಬ್ರೇಕಿಂಗ್ ನ್ಯೂಸ್
24-12-25 12:23 pm Mangalore Correspondent ಕರಾವಳಿ
ಮಂಗಳೂರು, ಡಿ.24 : ವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ತನ್ನ ಸಂಯೋಜನೆಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವ್ಯಾಪ್ತಿಯೊಳಗಿನ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದನೆ ನೀಡಿದೆ. ಈ ಕುರಿತು ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ನಿರ್ಧಾರಕ್ಕೆ ಒಳಪಟ್ಟ ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಲ್ಲಿಸಬೇಕಾಗುತ್ತದೆ. ಈಗಾಗಲೇ ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಯಾವುದೇ ತಡೆಯಿಲ್ಲದೆ ಕೋರ್ಸ್‌ಗಳನ್ನು ಪೂರೈಸಲು ಅವಕಾಶ ಕಲ್ಪಿಸಲಾಗುವುದು ಎಂದು ವಿಶ್ವವಿದ್ಯಾನಿಲಯ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಮತ್ತು ಕನಿಷ್ಠ 30 ವಿದ್ಯಾರ್ಥಿಗಳು ಇರಬೇಕೆಂಬ ವಿವಿ ನಿಮಯದ ಕಾರಣದಿಂದ ಸಣ್ಣ ಸಣ್ಣ ಕಾಲೇಜುಗಳು ಅಸ್ತಿತ್ವ ಕಳಕೊಂಡಿವೆ.
ಮುಚ್ಚಲಿರುವ ಕಾಲೇಜುಗಳ ಪಟ್ಟಿ
ವಿವಿಯ ಸಭೆಯಲ್ಲಿ ಮತ್ತೊಂದು ಪ್ರಮುಖ ನಿರ್ಧಾರವಾಗಿ, ಅರೇಬಿಕ್ ಭಾಷೆಯ ಅಧ್ಯಯನ ಮತ್ತು ಸಂಶೋಧನೆಗಾಗಿ ‘ಅರೇಬಿಕ್ ಅಧ್ಯಯನ ಕೇಂದ್ರ’ ಸ್ಥಾಪಿಸಲು ರಾಜ್ಯಪಾಲರ ಅನುಮೋದನೆ ದೊರೆತಿದೆ ಎಂದು ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಕೇಂದ್ರವು ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿನ ಪ್ರಾದೇಶಿಕ ಅರೇಬಿಕ್ ಉಪಭಾಷೆಗಳು, ಸ್ಥಳೀಯ ಸಂಸ್ಕೃತಿ ಹಾಗೂ ಸಮುದಾಯಗಳ ಅಧ್ಯಯನಕ್ಕೆ ಒತ್ತು ನೀಡಲಿದೆ ಎಂದು ಅವರು ಹೇಳಿದರು.
ಶೈಕ್ಷಣಿಕ ನವೀಕರಣಗಳಿಗೆ ಒಪ್ಪಿಗೆ
ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಹಲವು ಪಠ್ಯಕ್ರಮ ಸಂಬಂಧಿತ ನಿರ್ಧಾರಗಳನ್ನೂ ಕೈಗೊಳ್ಳಲಾಗಿದೆ:
ಬಿಎ ಅರ್ಥಶಾಸ್ತ್ರ ಪದವಿಯ ನಾಲ್ಕನೇ ಸೆಮಿಸ್ಟರ್‌ಗೆ ಕೌಶಲ್ಯಾಧಾರಿತ ಕೋರ್ಸ್‌ಗಳನ್ನು ಅನುಮೋದಿಸಲಾಗಿದೆ. ಬಿಎ ಪತ್ರಿಕೋದ್ಯಮದ ಮೂರನೇ ಮತ್ತು ನಾಲ್ಕನೇ ಸೆಮಿಸ್ಟರ್‌ಗಳಿಗೆ ಚುನಾಯಿತ (Elective) ಕೋರ್ಸ್‌ಗಳಿಗೆ ಒಪ್ಪಿಗೆ ನೀಡಲಾಗಿದೆ. ಎಲ್ಲಾ ಡೀನ್‌ಗಳು ಸಿದ್ಧಪಡಿಸಿರುವ ಪರಿಷ್ಕೃತ ಪಿಎಚ್‌ಡಿ ಕಾರ್ಯಕ್ರಮ ಮಾರ್ಗಸೂಚಿಗಳನ್ನು ಹೊಸ ಡಾಕ್ಟರೇಟ್ ಕೋರ್ಸ್‌ಗಳ ಪ್ರಾರಂಭಕ್ಕಾಗಿ ಅನುಮೋದಿಸಲಾಗಿದೆ.
Due to a drastic decline in student admissions, Mangalore University has approved the closure of 22 private colleges under its jurisdiction in Dakshina Kannada and Udupi districts. The decision was finalized during the Academic Council meeting chaired by Vice-Chancellor Prof. P.L. Dharma.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm