ಬ್ರೇಕಿಂಗ್ ನ್ಯೂಸ್
25-12-25 10:54 pm Mangalore Correspondent ಕರಾವಳಿ
ಮಂಗಳೂರು, ಡಿ.25 : ಎಂಆರ್ ಜಿ ಸಮೂಹ ಸಂಸ್ಥೆಗಳ ಚೇರ್ಮನ್ ಪ್ರಕಾಶ್ ಶೆಟ್ಟಿ ಸತತ ಏಳನೇ ವರ್ಷದಲ್ಲಿ ಸಾವಿರಾರು ಮಂದಿಗೆ ಸಹಾಯ ಹಸ್ತ ಚಾಚಿದ್ದು, ಈ ಬಾರಿ 4 ಸಾವಿರಕ್ಕೂ ಹೆಚ್ಚು ಬಡವರಿಗೆ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ 9.5 ಕೋಟಿ ರೂಪಾಯಿ ನೆರವು ಯೋಜನೆ ನೀಡಿದ್ದಾರೆ.
ಗುರುವಾರ ಸಂಜೆ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆದ ಆಶಾ ಪ್ರಕಾಶ್ ಶೆಟ್ಟಿ ನೆರವು ಕಾರ್ಯಕ್ರಮದಲ್ಲಿ ಎಲ್ಲ ಫಲಾನುಭವಿಗಳಿಗೂ ನೇರವಾಗಿ ಚೆಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಪ್ರಕಾಶ್ ಶೆಟ್ಟಿ, ಸಾಮಾನ್ಯ ಕುಟುಂಬದಲ್ಲಿ ಜನಿಸಿ ಬದುಕಿನ ಎಲ್ಲ ರೀತಿಯ ಕಷ್ಟಗಳನ್ನು ಉಂಡು 1983ರಲ್ಲಿ ಬೆಂಗಳೂರಿಗೆ ತೆರಳಿ ಹಂತ ಹಂತವಾಗಿ ಮೇಲೇರಿದವನು. ಹಾಗಾಗಿ, ಜೀವನದ ಎಲ್ಲ ಕಷ್ಟಗಳನ್ನೂ ತಿಳಿದುಕೊಂಡಿದ್ದೇನೆ. ರಿಯಲ್ ಎಸ್ಟೇಟ್ ಮತ್ತು ಹೊಟೇಲ್ ಉದ್ಯಮದಲ್ಲಿ ಯಶಸ್ಸು ಸಾಧಿಸಿ, ಗಳಿಕೆಯ ಒಂದಂಶವನ್ನು ನನ್ನ ಉಡುಪಿ ಮತ್ತು ಮಂಗಳೂರಿನ ಅರ್ಹರಿಗೆ ದಾನ ಮಾಡಲು ನಿರ್ಧರಿಸಿದ್ದೇನೆ.



2019ರಲ್ಲಿ ನನ್ನ 60ನೇ ವರ್ಷಕ್ಕೆ ಅಭಿಮಾನಿಗಳು ಸೇರಿ ಅಭೂತಪೂರ್ವ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಒಂದೂ ಕಾಲು ಕೋಟಿ ರೂಪಾಯಿ ನೆರವನ್ನು ನೀಡಿದ್ದೆ. ಆನಂತರ ಪ್ರತಿ ವರ್ಷ ನೆರವಿನ ಹಸ್ತ ನೀಡುತ್ತ ಬಂದಿದ್ದು, ಈವರೆಗೆ 15 ಸಾವಿರ ಮಂದಿಗೆ ಸಹಾಯಧನ ನೀಡಿದ್ದೇವೆ. ಹಲವಾರು ಮಂದಿ ಇಂಜಿನಿಯರಿಂಗ್ ಮತ್ತಿತರ ಉನ್ನತ ಶಿಕ್ಷಣ ಪಡೆದು ತಾವೂ ನೆರವಿನ ಯೋಜನೆಯಲ್ಲಿ ಪಾಲುದಾರರಾಗುತ್ತೇವೆ ಎಂದು ಪತ್ರ ಬರೆದಿದ್ದಾರೆ. ಇದನ್ನು ಕೇಳಿ ಹೃದಯ ತುಂಬಿ ಬಂದಿದ್ದು, ಸಾರ್ಥಕ ಭಾವ ಉಂಟಾಗಿದೆ. ಇನ್ನು ಮೂರು ವರ್ಷ ನೆರವು ಯೋಜನೆ ಮುಂದುವರಿಸಿ, ಆಬಳಿಕ ನೆರವು ಯೋಜನೆಯ ಫಲಾನುಭವಿಗಳನ್ನು ಸೇರಿಸಿಕೊಂಡು ಅದಕ್ಕೊಂದು ಸಾಮೂಹಿಕ ರೂಪ ಕೊಡುವ ಚಿಂತನೆ ಇದೆ. ಆಮೂಲಕ ಪ್ರತಿ ವರ್ಷ 14 ಸಾವಿರ ಮಂದಿಗೆ ನೆರವು ನೀಡಲು ಸಾಧ್ಯವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಎಲ್ಲ ಜಾತಿ, ಎಲ್ಲ ಸಮುದಾಯದ ಜನರನ್ನು ಒಂದೆಡೆ ಸೇರಿಸಿ ನೊಂದ ಶೋಷಿತ ಜನರ ಜೊತೆ ನಾನಿದ್ದೇನೆ ಎನ್ನುವ ಪ್ರಕಾಶ್ ಶೆಟ್ಟಿಯವರ ಮನೋಬಲಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕಿದೆ. ಸಾಮರಸ್ಯ ಮತ್ತು ಶಾಂತಿಯುತ ಸಮಾಜದ ನಿರ್ಮಾಣಕ್ಕಾಗಿ ನಾವೆಲ್ಲರೂ ಶ್ರಮ ಪಡಬೇಕು ಎಂದರು.
ವೇದಿಕೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಆಶಾ ಪ್ರಕಾಶ್ ಶೆಟ್ಟಿ, ಮೂಡಬಿದ್ರೆಯ ಅಳ್ವಾಸ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಮೋಹನ್ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ಆಡಳಿತ ನಿರ್ದೇಶಕ ಗೌರವ್ ಪಿ.ಶೆಟ್ಟಿ ಉಪಸ್ಥಿತರಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಗುರುಪುರ ವಜ್ರದೇಹಿ ಸ್ವಾಮೀಜಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಡಾ.ಭರತ್ ವೈ.ಶೆಟ್ಟಿ, ಡಿ.ವೇದವ್ಯಾಸ ಕಾಮತ್ ಮತ್ತಿತರರಿದ್ದರು.
In the seventh year of the Asha Prakash Shetty Assistance Program, MRG Group Chairman Dr. Prakash Shetty distributed financial aid totaling ₹9.5 crore to over 4,000 underprivileged families for education and healthcare. The event, held at Goldfinch City in Bangrakulur, saw direct cheque distribution to beneficiaries.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm