ಬ್ರೇಕಿಂಗ್ ನ್ಯೂಸ್
28-12-25 11:50 am Mangalore Correspondent ಕರಾವಳಿ
ಮಂಗಳೂರು, ಡಿ.28 : ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ.
ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯದಲ್ಲಿದ್ದ ಇವರು ಇತ್ತೀಚೆಗೆ ಪಾಂಡೇಶ್ವರ ಠಾಣೆಗೆ ಬಂದಿದ್ದರು. ಮೂರು ವರ್ಷಗಳ ಹಿಂದೆ ಕದ್ರಿ ವ್ಯಾಸನಗರದಲ್ಲಿ ಹೊಸ ಮನೆ ಮಾಡಿ ನೆಲೆಸಿದ್ದರು.






ಪತ್ನಿ ಮತ್ತು ಮಕ್ಕಳು ರಜೆಯ ಕಾರಣ ನಿನ್ನೆ ಊರಿಗೆ ತೆರಳಿದ್ದರು. ಇಂದು ಬೆಳಗ್ಗೆ ಸಹಜವಾಗಿಯೇ ಇದ್ದ ಹರಿಶ್ಚಂದ್ರ ಅವರು ದೇವರಿಗೆ ಹೂ ಇಡಲು ಹೊರಗಿನಿಂದ ಹೂ ಕೊಯ್ಯುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದರು. ಬೆಳಗ್ಗೆ 10.30ರ ವೇಳೆಗೆ ಹಠಾತ್ ಮನೆಯ ಹೊರಗಡೆ ಎದುರು ಭಾಗದಲ್ಲಿ ಬೆಂಕಿ ಹತ್ತಿಕೊಂಡು ಬೊಬ್ಬೆ ಕೇಳಿದ್ದು ಪಕ್ಕದ ಮನೆಯವರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೈಯಲ್ಲಿದ್ದ ಅಂಗಿ ಸಹಿತ ಮೈ ಪೂರ್ತಿ ಸುಟ್ಟು ಹೋಗಿದೆ. ಕೂಡಲೇ ಮಾಹಿತಿ ಪಡೆದು ಕದ್ರಿ ಪೊಲೀಸರು ಮತ್ತು ಆಂಬುಲೆನ್ಸ್ ಬಂದಿದ್ದು ಅವರನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ.
ಮನೆಯ ಹೊರಗಡೆ ಬಿಸ್ಲೆರಿ ನೀರಿನ ಬಾಟಲಿಯಲ್ಲಿ ಅರ್ಧ ಸುಟ್ಟು ಹೋದ ಸ್ಥಿತಿಯಲ್ಲಿ ಪೆಟ್ರೋಲ್ ತುಂಬಿರುವ ಕ್ಯಾನ್ ಪತ್ತೆಯಾಗಿದೆ. ನೀರು ಹಾಕಿದ್ದರಿಂದ ಕರಟಿ ಹೋದ ಬಾಟಲಿ ಸಹಿತ ಅದರಲ್ಲಿ ಅರ್ಧದಷ್ಟು ಪೆಟ್ರೋಲ್ ಉಳಿದಿದೆ. ಮೈಗೆ ಪೆಟ್ರೋಲ್ ಸುರಿದುಕೊಂಡ ಸಂದರ್ಭದಲ್ಲಿ ಎದುರು ಮನೆಯ ತಗಡು ಶೀಟಿಗೂ ಬಿದ್ದಿದೆ. ಬೆಂಕಿ ಅದಕ್ಕೂ ತಗಲಿದ್ದು ಶೀಟ್ ಸಹಿತ ಮನೆಯ ಫೈಬರ್ ಪೈಪ್ ಸುಟ್ಟು ಹೋಗಿದೆ. ನೆಲಹಾಸಿನ ಮ್ಯಾಟ್ ಕೂಡ ಸುಟ್ಟು ಹೋಗಿದೆ. ಕದ್ರಿ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
In a shocking incident in Mangaluru’s Kadri Vyasanagar, an Assistant Sub-Inspector (ASI) attached to Pandeshwar Police Station attempted suicide by setting himself on fire. Harishchandra Berike, a native of Mulleria in Kasaragod and a police officer with 27 years of service, reportedly poured petrol on himself and ignited it while alone at home. His wife and children had gone to their native place for the holidays. Neighbours, who heard his screams, rushed in and extinguished the flames before alerting police and medical personnel.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm