ಬ್ರೇಕಿಂಗ್ ನ್ಯೂಸ್
29-12-25 08:47 pm Mangalore Correspondent ಕರಾವಳಿ
ಮಂಗಳೂರು, ಡಿ.29: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಕಾರನ್ನು ಮಂಗಳೂರಿನ ಡಿಸಿಆರ್ ಇ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದರು. ಘಟನೆ ಸಂದರ್ಭದಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು ಹೊರಗಡೆ ಎಸೆಯಲ್ಪಟ್ಟಿದ್ದಾನೆ. ಈ ವೇಳೆ, ಕಾಲು ತುಂಡಾಗಿದ್ದು, ತಲೆಗೆ ತೀವ್ರ ಏಟು ಬಿದ್ದು ಮೃತಪಟ್ಟಿದ್ದಾರೆ.


ಘಟನೆ ಸಂದರ್ಭದಲ್ಲಿ ಕಾರು ಚಲಾಯಿಸುತ್ತಿದ್ದ ಪೊಲೀಸ್ ಪೇದೆ ಪ್ರಸನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದವರು ಕಾರಿನ ಒಳಗಡೆ ಶೇಂದಿಯನ್ನು ತುಂಬಿಸಿದ್ದ ಬಾಟಲಿ ಇರುವುದನ್ನು ಪತ್ತೆ ಮಾಡಿದ್ದು, ವಿಡಿಯೋ ಮಾಡಿ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲದೆ, ಕಾರಿನ ಒಳಗೆ ಪೊಲೀಸರು ಬಳಸುವ ಟೋಪಿ ಕಂಡುಬಂದಿದ್ದು, ಇದು ಯಾರದ್ದೋ ಪೊಲೀಸರದ್ದೇ ಕಾರು ಎನ್ನುವ ಗುಮಾನಿಯಲ್ಲಿ ಕುಡಿದು ವಾಹನ ಚಲಾಯಿಸಿದ್ದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳೆಯೊಬ್ಬರು ಮಾಡಿದ್ದ ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸ್ಪಿ ಅರುಣ್ ಅವರು ತನಿಖೆಗೆ ಸೂಚಿಸಿದ್ದು ಸದ್ರಿ ಪೊಲೀಸ್ ಸಿಬಂದಿ ಪ್ರಸನ್ನ ಅವರನ್ನು ಆ ಮಹಿಳೆ ಮತ್ತು ಸಂತ್ರಸ್ತ ಯುವಕನ ಸಂಬಂಧಿಕರ ಸಮ್ಮುಖದಲ್ಲಿಯೇ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಲ್ಕೋ ಮೀಟರಿನಲ್ಲಿ ತಪಾಸಣೆ ನಡೆಸಿದ ವೇಳೆ ನೆಗೆಟಿವ್ ಬಂದಿದ್ದು ರಕ್ತ ಪರೀಕ್ಷೆಯನ್ನೂ ನಡೆಸುವಂತೆ ಎಸ್ಪಿ ಸೂಚಿಸಿದ್ದಾರೆ. ಘಟನೆ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A fatal accident near Pilathabettu in Punjalkatte, Bantwal taluk, claimed the life of Imran Mohammed Taha after his bike collided head-on with a Nano car allegedly driven by police staffer Prasanna of Mangaluru DCR(E). The biker died on the spot from severe head injuries, with his leg severed in the impact.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm