ಬ್ರೇಕಿಂಗ್ ನ್ಯೂಸ್
31-12-25 10:57 pm Mangalore Correspondent ಕರಾವಳಿ
ಮಂಗಳೂರು, ಡಿ.31 : ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧಿಸಿ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ ಬೆಳ್ತಂಗಡಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧಿಸಿ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆಂದು ವರದಿಯಲ್ಲಿ ಉಲ್ಲೇಖವಾಗಿದ್ದರೂ ಆರೋಪಿಗಳ ವಿರುದ್ದ ಕ್ರಮ ಕೈಗೊಂಡಿಲ್ಲ ಎಂದು ಹೇಳಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಅರ್ಜಿ ಸಲ್ಲಿಸಿದ್ದು ಹಿರಿಯ ವಕೀಲರಿಬ್ಬರು ವಾದ ಮಂಡನೆ ಮಾಡಲಿದ್ದಾರೆ. ಎಸ್ಐಟಿ ವರದಿ ಸಂಬಂಧಿಸಿ ಮುಂದಿನ ಕ್ರಮ ಏನಿರಬೇಕು ಎಂಬ ಬಗ್ಗೆ ಜ.3ರಂದು ಬೆಳ್ತಂಗಡಿ ಕೋರ್ಟ್ ಆದೇಶ ಮಾಡಲಿದ್ದು ಇದರ ನಡುವೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿ ಸಲ್ಲಿಸಿರುವುದು ಮಹತ್ವ ಪಡೆದಿದೆ.
ಧರ್ಮಸ್ಥಳ ವಿರುದ್ಧ ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರು ಮಂದಿ ಷಡ್ಯಂತ್ರ ನಡೆಸಿರುವುದಾಗಿ ಎಸ್ಐಟಿ ಕೋರ್ಟಿಗೆ ವರದಿ ಸಲ್ಲಿಸಿರುವುದಾಗಿ ಹೇಳಲಾಗುತ್ತಿದೆ. ತಿಮರೋಡಿ ಮನೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ, ಚಿನ್ನಯ್ಯ ಸೇರಿ ಸಭೆ ನಡೆಸಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿ ನಡೆಸಲು ಯೋಜನೆ ಹಾಕಲಾಗಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಲಾಗಿತ್ತು ಎಂಬುದನ್ನು ಎಸ್ಐಟಿ ವರದಿ ತಿಳಿಸಿದೆ.
A petition has been submitted in the Beltangady court requesting action against those allegedly involved in the Dharmasthala conspiracy case. Senior advocates C.V. Nagesh and Mahesh Kaje filed the petition on behalf of the Dharmasthala region, citing the SIT report that names six individuals for plotting against the institution. The court will issue further orders on January 3 based on the SIT findings.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm