ಬ್ರೇಕಿಂಗ್ ನ್ಯೂಸ್
03-01-26 08:12 pm Mangalore Correspondent ಕರಾವಳಿ
ಮಂಗಳೂರು, ಜ.3: ತುಳುನಾಡಿನಲ್ಲಿ ದೈವ- ದೇವಸಸ್ಥಾನದ ಜಾತ್ರೋತ್ಸವ ಸಂದರ್ಭ ನಡೆಯುತ್ತಿರುವ ಕೋಳಿ ಅಂಕ ವಿಚಾರದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಚಿಲ್ಲರೆ ರಾಜಕೀಯ ಮಾಡಲು ಹೊರಟಿದ್ದಾರೆ. ಈ ನೆಲದ ಬಗ್ಗೆ ನಿಜವಾಗಿಯೂ ಬಿಜೆಪಿ ನಾಯಕರಿಗೆ ಆಸಕ್ತಿ, ಕಾಳಜಿ ಇದ್ದಿದ್ದರೆ ಅಧಿವೇಶನ ಸಂದರ್ಭ ಯಾಕೆ ಚರ್ಚೆ ಮಾಡದೆ ಮೌನವಾಗಿದ್ದರು? ಅಧಿವೇಶನದಲ್ಲಿ ಸಮಗ್ರ ಚರ್ಚೆ ನಡೆಸಬಹುದಿತ್ತಲ್ವೇ? ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.
ತುಳುನಾಡಿನ ದೈವರಾಧನೆ, ಈ ನೆಲದ ಸಂಸ್ಕೃತಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ, ಮಾತ್ರವಲ್ಲದೆ ಸದಾ ಬೆಂಬಲ ನೀಡುತ್ತಿದೆ. ಈ ನೆಲದ ಜಾನಪದ ಕ್ರೀಡೆ ಕಂಬಳಕ್ಕೆ ಅನುದಾನ, ದೈವ-ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಸೇರಿದಂತೆ ಕರಾವಳಿ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಿದೆ. ಜಾತ್ರೋತ್ಸವ ಸಂದರ್ಭ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಆದರೆ ಪೊಲೀಸ್ ಅಧಿಕಾರಿಗಳು ಕಾನೂನು ಕಾರಣದಿಂದ ಕೋಳಿ ಅಂಕಕ್ಕೆ ಅವಕಾಶ ನೀಡುತ್ತಿಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಶೋಭೆಯಲ್ಲ. ಬಿಜೆಪಿಯವರ ಮೌನವೇ ಕೋಳಿ ಅಂಕ ವಿಚಾರ ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ ಎಂದಿದ್ದಾರೆ.
ಕೆಂಪು ಕಲ್ಲು ಗಣಿಗಾರಿಕೆ ಕ್ರಮಬದ್ಧ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಕೆಂಪು ಕಲ್ಲು ಗಣಿಗಾರಿಕೆ ಅಕ್ರಮವಾಗಿ ನಡೆಯುತ್ತಿದ್ದು, ಲಂಗು ಲಗಾಮಿಲ್ಲದೆ ವ್ಯವಹಾರ ನಡೆಯುತ್ತಿತ್ತು. ರಾಜ್ಯ ಸರಕಾರಕ್ಕೂ ಸಮರ್ಪಕವಾಗಿ ರಾಜಸ್ವ ಸಂದಾಯವಾಗದೆ ಅಕ್ರಮ ಚಟುವಟಿಕೆಗಳಿಗೆ ನೆರವಾಗುತ್ತಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಕ್ರಮಗಳಿಗೆ ಮೂಗುದಾರ ಹಾಕಿ ಕೆಂಪು ಕಲ್ಲು ಗಣಿಗಾರಿಕೆಯನ್ನು ಕ್ರಮಬದ್ಧಗೊಳಿಸಿ ಜನರಿಗೆ ಕೆಂಪು ಕಲ್ಲು ಸುಲಭವಾಗಿ, ಕಾನೂನು ರೀತಿಯಲ್ಲಿ ಸಿಗುವಂತಾಗಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮರಳುಗಾರಿಕೆ ಪರವಾನಗಿ ವಿಚಾರದಲ್ಲೂ ನಾನ್ ಸಿಆರ್‌ಝೆಡ್ ಪರವಾನಗಿ ಸಮಸ್ಯೆ ಈಗಾಗಲೇ ಬಗೆಹರಿದಿದ್ದು, ಬೇಕಾದಷ್ಟು ಮರಳು ಸಿಗುತ್ತಿದೆ. ನಾನ್ ಸಿಆರ್‌ಝೆಡ್ ಮರಳುಗಾರಿಕೆ ಕೇಂದ್ರ ಸರಕಾರದ ಸುಪರ್ದಿಯಲ್ಲಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಬಿಜೆಪಿ ಸಂಸದರು, ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಲಿ. ಸಿಆರ್‌ಝೆಡ್ ಮರಳು ಸಮಸ್ಯೆ ಬಗೆಹರಿದರೆ ಬಡವರಿಗೆ ನಿಜವಾಗಿಯೂ ಅನುಕೂಲವಾಗಲಿದೆ. ಬಿಜೆಪಿಯವರು ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ಬಗೆಹರಿಸಿ ಜನರಿಗೆ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸುಲಭದಲ್ಲಿ ಮರಳು ಸಿಗುವಂತೆ ಮಾಡಲಿ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.
Dakshina Kannada District Congress President Harish Kumar criticized BJP MLAs for allegedly politicising the traditional Koli Anka issue during temple festivals in Tulu Nadu. He questioned why BJP leaders, who claim concern for local culture, failed to raise the matter during the Assembly session where a detailed discussion could have been held.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm