ಬ್ರೇಕಿಂಗ್ ನ್ಯೂಸ್
03-01-26 09:13 pm Mangalore Correspondent ಕರಾವಳಿ
ಮಂಗಳೂರು, ಜ.3 : ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 23 ರಿಂದ 26ರ ವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳು
ಫಲಪುಷ್ಪ ಪ್ರದರ್ಶನದ ಅಂಗವಾಗಿ ಮುಖ್ಯ ಆಕರ್ಷಣೆಯಾಗಿ ಹೂವುಗಳಿಂದ ವಿವಿಧ ಕಲಾಕೃತಿಯನ್ನು ತಯಾರಿಸಿ ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ಕದ್ರಿ ಉದ್ಯಾನವನದಲ್ಲಿ ಸುಮಾರು 15 ಸಾವಿರ ಸಂಖ್ಯೆಯ 30 ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಪೆಟೂನಿಯಾ, ಟೊರಿನೋ, ಇತ್ಯಾದಿ ಹೂವುಗಳನ್ನು ಕುಂಡಗಳಲ್ಲಿ ಬೆಳೆಯಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ. ಹಾಗೂ ತರಕಾರಿ ಕೈತೋಟದ ಪ್ರಾತ್ಯಕ್ಷತೆಯನ್ನು ಏರ್ಪಡಿಸಲಾಗುತ್ತದೆ.
ಹಣ್ಣು ಮತ್ತು ತರಕಾರಿಗಳಿಂದ ಜಿಲ್ಲೆಯ ಪ್ರಾಮುಖ್ಯತೆ ಬಗ್ಗೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಕೆತ್ತನೆ ಮಾಡಿ ಪ್ರದರ್ಶಿಸಲಾಗುತ್ತದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ. ವಿವಿಧ ಜೇನು ಸಹಕಾರ ಸಂಘ, ರೈತ ಉತ್ಪಾದಕರ ಸಂಸ್ಥೆಗಳಿಂದ ಜೇನಿನ ವಿವಿಧ ತಳಿಗಳ, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಜೇನಿನ ಔಷಧೀಯ ಗುಣಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.
ಸಸ್ಯ ಉತ್ಸವ ಏರ್ಪಡಿಸಿ ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತದೆ.
ಫಲಪುಷ್ಪ ಪ್ರದರ್ಶನದಲ್ಲಿ ವಯಸ್ಕರಿಗೆ 30 ರೂ. ಮತ್ತು ಮಕ್ಕಳಿಗೆ ರೂ. 20 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಶಾಲಾ ಶಿಕ್ಷಕರೊಂದಿಗೆ ಸಮವಸ್ತ್ರದಲ್ಲಿ ಆಗಮಿಸುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತದೆ. ರೈತರು ಬೆಳೆದಿರುವಂತಹ ವಿಶಿಷ್ಟ ಬಗೆಯ ಹಣ್ಣು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳು, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದಂತಹ ಪ್ರದರ್ಶಿಕೆಗಳನ್ನು ಜನವರಿ 22 ರಂದು ಬೆಳಗ್ಗೆ 10.30 ಗಂಟೆಗೆ ಕದ್ರಿ ಉದ್ಯಾನವನಕ್ಕೆ ತರಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of Republic Day celebrations, a Fruit and Flower Exhibition will be organised from January 23 to 26 at Kadri Park, Mangaluru. The event is jointly hosted by the Horticulture Department, District Administration, Zilla Panchayat, Dakshina Kannada, Kadri Park Development Committee, and Siri Horticulture Association, Mangaluru.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am