ಬ್ರೇಕಿಂಗ್ ನ್ಯೂಸ್
16-01-26 07:33 pm Mangalore Correspondent ಕರಾವಳಿ
ಮಂಗಳೂರು, ಜ.16 : ಕರಾವಳಿಯ ಸಾರಿಗೆ ಸಂಪರ್ಕ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡಲು ಕರ್ನಾಟಕ ಕರಾವಳಿ ಜಲಸಾರಿಗೆ ಮಂಡಳಿ (ಮರಿಟೈಮ್ ಬೋರ್ಡ್) ಎರಡು ಬೃಹತ್ ಯೋಜನೆಗಳನ್ನು ಘೋಷಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಂಚಾರ ದಟ್ಟಣೆಗೆ ಪರ್ಯಾಯವಾಗಿ ಮಂಗಳೂರಿನಿಂದ ಕುಂದಾಪುರದ ಮರವಂತೆಯ ವರೆಗೆ ಸಾಗರ ಮಾರ್ಗದ ‘ಫೆರ್ರಿ’ (ದೋಣಿ) ಸೇವೆ ಮತ್ತು ಮಂಗಳೂರು ನಗರದ ಸುತ್ತಮುತ್ತ ‘ಜಲ ಮೆಟ್ರೋ’ ಜಾರಿಗೆ ಯೋಜನೆ ರೂಪಿಸಿದೆ.
ಮಂಗಳೂರು - ಮರವಂತೆ ಕರಾವಳಿ ಫೆರ್ರಿ ಸೇವೆ
ಮಂಗಳೂರಿನಿಂದ ಕುಂದಾಪುರ ತಾಲೂಕಿನ ಮರವಂತೆಯ ವರೆಗೆ ಸುಮಾರು 110 ಕಿ.ಮೀ. ಉದ್ದದ ಜಲಮಾರ್ಗವನ್ನು ಅಭಿವೃದ್ಧಿಪಡಿಸುತ್ತಿದೆ. ಫೆರ್ರಿ ಸೇವೆಯು ಹಳೆ ಮಂಗಳೂರು ಬಂದರು, ಹೆಜಮಾಡಿ, ಮಲ್ಪೆ, ಕೋಟ ಮತ್ತು ಮರವಂತೆ ಹೀಗೆ ಒಟ್ಟು ಐದು ಕಡೆಗಳಲ್ಲಿ ನಿಲುಗಡೆ ಹೊಂದಿರಲಿದೆ. ಅಂದಾಜು 37.8 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನ ಗೊಳಿಸಲಾಗುವುದು. ಆಯ್ಕೆಯಾದ ಸಂಸ್ಥೆಗೆ 20 ವರ್ಷಗಳ ಕಾಲ ನಿರ್ವಹಣೆಯ ಜವಾಬ್ದಾರಿ ನೀಡಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಿಲುಗಡೆ ಇರುವ ಐದೂ ಸ್ಥಳಗಳಲ್ಲಿ ಅತ್ಯಾಧುನಿಕ ಜೆಟ್ಟಿಗಳನ್ನು (ದೋಣಿ ನಿಲ್ದಾಣ) ನಿರ್ಮಿಸಲು ಉದ್ದೇಶಿಸಲಾಗಿದೆ.
ಮಂಗಳೂರಿಗೆ ಜಲ ಮೆಟ್ರೋ ಯೋಜನೆ
ಇದೇ ವೇಳೆ, ಮಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುಮಾರು 180 ಕೋಟಿ ರೂ. ಹೂಡಿಕೆಯೊಂದಿಗೆ ‘ಜಲ ಮೆಟ್ರೋ’ ಯೋಜನೆಯನ್ನು ರೂಪಿಸಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಮಳವೂರು ಸೇತುವೆಯಿಂದ ಜಪ್ಪಿನಮೊಗರು ಸೇತುವೆಯ ವರೆಗೆ ಈ ಸೇವೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಗುರುಪುರ ಮತ್ತು ನೇತ್ರಾವತಿ ನದಿಗಳ ಮೂಲಕ ಹಳೆ ಮಂಗಳೂರು ಬಂದರನ್ನು ಸಂಪರ್ಕಿಸುವ ಈ ಮಾರ್ಗವು ನಗರದ ವಿವಿಧ ಭಾಗಗಳನ್ನು ಜೋಡಿಸಲಿದೆ.
ಪ್ರವಾಸೋದ್ಯಮಕ್ಕೆ ಬೂಸ್ಟ್ ಸಾಧ್ಯತೆ
ಮರವಂತೆಯಂತಹ ಪ್ರವಾಸಿ ತಾಣಗಳಿಗೆ ಸಮುದ್ರ ಮಾರ್ಗದ ಮೂಲಕ ಪ್ರಯಾಣಿಸುವುದು ಪ್ರವಾಸಿಗರಿಗೆ ಹೊಸ ಅನುಭವ ನೀಡಲಿದೆ. ಪರಿಸರ ಸ್ನೇಹಿ ಮತ್ತು ಕಡಿಮೆ ವೆಚ್ಚದ ಈ ಜಲ ಸಾರಿಗೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆರ್ಥಿಕತೆಗೆ ದೊಡ್ಡ ಬಲ ನೀಡಲಿದೆ ಎಂದು ಮಂಡಳಿಯ ಅಧಿಕಾರಿಗಳು ಆಶಿಸಿದ್ದಾರೆ.
The Karnataka Maritime Board has announced plans to introduce a sea-route ferry service between Mangaluru and Maravanthe, along with a Water Metro project in Mangaluru. Aimed at easing NH-66 traffic and boosting coastal tourism, the projects are expected to improve connectivity and provide an eco-friendly transport alternative.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm