ಬ್ರೇಕಿಂಗ್ ನ್ಯೂಸ್
18-01-26 09:58 pm Mangalore Correspondent ಕರಾವಳಿ
ಪುತ್ತೂರು, ಜ.18 : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ.
ಮೃತ ಯುವಕರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಈ ವೇಳೆ, ಸುಜಿತ್ ಸ್ನಾನಕ್ಕೆಂದು ಕುಲ್ಕುಂದದಲ್ಲಿ ಕುಮಾರಧಾರ ನದಿಗೆ ಇಳಿದಿದ್ದು, ಆತನಿಗೆ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಹರಿಪ್ರಸಾದ್ ರಕ್ಷಣೆಗಾಗಿ ನದಿಗೆ ಇಳಿದಿದ್ದು ಇಬ್ಬರೂ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನೀರಿನಲ್ಲಿ ಮುಳುಗಿದ ಇಬ್ಬರ ಮೃತದೇಹ ತುಸು ದೂರ ನದಿಯ ದಡದಲ್ಲಿದ್ದು ನದಿಯಿಂದ ಮೇಲಕ್ಕೆತ್ತಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ಅನುಗ್ರಹ ಎಂಟರ್ ಪ್ರೈಸಸ್ ಹೆಸರಿನ ಹಾರ್ಡ್ ವೇರ್ ಅಂಗಡಿ ನಡೆಸುತ್ತಿದ್ದರು. ಅದೇ ಅಂಗಡಿಯಲ್ಲಿ ಸುಜಿತ್ ಕೆಲಸಕ್ಕಿದ್ದರು. ವನಭೋಜನ ಸಲುವಾಗಿ ಭಾನುವಾರ ಮಧ್ಯಾಹ್ನ ಇತರ ಹತ್ತು ಮಂದಿ ಸ್ನೇಹಿತರು ಕುಮಾರಧಾರಾ ನದಿಯ ಬಳಿಗೆ ಬಂದಿದ್ದರು. ಸಂಜೆಯ ವೇಳೆಗೆ ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಅನಾಹುತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Two young men from Sullia, Hariprasad (37) and Sujith (26), drowned in the Kumaradhara River near Kukke Subrahmanya while bathing during a picnic. Sujith, who could not swim, slipped into deep water, and Hariprasad drowned while trying to rescue him. Police have registered a case and are investigating the incident.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm