ಬ್ರೇಕಿಂಗ್ ನ್ಯೂಸ್
31-12-20 03:09 pm Mangalore Correspondent ಕರಾವಳಿ
ಮುಲ್ಕಿ, ಡಿ.31 : ಕಿನ್ನಿಗೋಳಿ ಬಸ್ ನಿಲ್ದಾಣ ಬಳಿ ಖಾಸಗಿ ಕಟ್ಟಡದ ಮಾಲೀಕರಿಬ್ಬರು ಸೇರಿ ಪಾರ್ಕಿಂಗ್ ವಿಚಾರದಲ್ಲಿ ಯುವಕನಿಗೆ ಹಲ್ಲೆಗೈದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ಅನುಗ್ರಹ ಹೆಸರಿನ ಕಟ್ಟಡದ ಮಾಲೀಕ ನಿತ್ಯಾನಂದ ಮತ್ತು ಸಹೋದರರು, ನರೇಂದ್ರ ಪೂಜಾರಿ ಎಂಬವರ ಮೇಲೆ ಬೈಕ್ ಪಾರ್ಕಿಂಗ್ ವಿಷಯದಲ್ಲಿ ಅಮಾನುಷವಾಗಿ ನಿನ್ನೆ ಹಲ್ಲೆ ನಡೆಸಿದ್ದರು. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಕಟ್ಟಡ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿತ್ತು.
ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ ನಾಗರಿಕರು ಅದೇ ಕಟ್ಟಡದ ಮುಂಭಾಗದಲ್ಲಿ ಬೈಕ್ ಪಾರ್ಕ್ ಮಾಡಿ, ಆಕ್ರೋಶ ತೋರಿದ್ದಾರೆ. ಗುತ್ತಕಾಡು ಬಿಲ್ಲವ ಸಂಘದ ಅಧ್ಯಕ್ಷ ಕುಶಲ ಪೂಜಾರಿ ಮಾತನಾಡಿ, ಹಲವು ವರ್ಷಗಳಿಂದ ನಿತ್ಯಾನಂದ ಮತ್ತು ಸಹೋದರರು ತಮ್ಮ ಕಟ್ಟಡದ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಬೈಕ್ ಅಥವಾ ಇನ್ನಿತರ ವಾಹನಗಳನ್ನು ಪಾರ್ಕಿಂಗ್ ಮಾಡಿದವರಿಗೆ ಕಿರುಕುಳ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಪೊಲೀಸ್ ಸಿಬ್ಬಂದಿಯೊಬ್ಬರ ವಾಹನದ ಚಕ್ರದ ಗಾಳಿ ತೆಗೆದಿದ್ದಾರೆ. ಅಲ್ಲದೆ, ದ್ವಿಚಕ್ರ ವಾಹನ ನಿಲುಗಡೆಗೆ ಬಂದಿದ್ದ ವೃದ್ಧರನ್ನು ದೂಡಿ ಹಾಕಿದ್ದರು. ಈಗ ಯುವಕನ ಮೇಲೆ ದೊಣ್ಣೆಯಲ್ಲಿ ಹಲ್ಲೆ ನಡೆಸಿದ್ದು ಪೊಲೀಸರು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಪಂ ಸದಸ್ಯ ದಿವಾಕರ ಕರ್ಕೇರ ಮಾತನಾಡಿ, ಎರಡು ದಿನಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದರು.
ಇದೇ ವೇಳೆ, ನಾಗರಿಕರು ಆರೋಪಿಗಳ ಕಟ್ಟಡಕ್ಕೆ ಮುತ್ತಿಗೆ ಹಾಕುವ ಯತ್ನಿಸಿದ್ದು ಪೊಲೀಸರ ಜತೆ ಮಾತಿನ ಚಕಮಕಿ ನಡೆಯಿತು. ಬಳಿಕ ಮುಲ್ಕಿ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ್ ಸ್ಥಳಕ್ಕೆ ಧಾವಿಸಿ ಪ್ರತಿಭಟನಾ ನಿರತರನ್ನು ಸಮಾಧಾನಿಸಿದರು.
ಮಾಜಿ ಜಿಪಂ ಸದಸ್ಯೆ ಆಶಾ ಸುವರ್ಣ, ಸಾಮಾಜಿಕ ಕಾರ್ಯಕರ್ತರಾದ ರವೀಂದ್ರ ದೇವಾಡಿಗ, ಪ್ರಕಾಶ್ ಆಚಾರ್ಯ , ವಿಶ್ವನಾಥ ಶೆಟ್ಟಿ ಪದ್ಮನೂರು, ಲಕ್ಷ್ಮಣ ಪುನರೂರು ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ: ಪಾರ್ಕಿಂಗ್ ತಗಾದೆ ; ಬಿಜೆಪಿ ಕಾರ್ಯಕರ್ತನಿಗೆ ದೊಣ್ಣೆಯಲ್ಲಿ ಹಲ್ಲೆಗೈದ ವ್ಯಾಪಾರಿ !! ವೀಡಿಯೋ ವೈರಲ್
Public protest demanding arrest of the two shopkeepers who assaulted a biker for parking a bike in front of a shop in Kinnigoli junction on Wednesday December 30.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm