ಬ್ರೇಕಿಂಗ್ ನ್ಯೂಸ್
19-01-26 10:55 pm Mangalore Correspondent ಕರಾವಳಿ
ಮಂಗಳೂರು, ಜ.19 : ಐದು ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳ ಕಾದು ನೆರೆಮನೆಯ ದಂಪತಿಯನ್ನು ಅಟ್ಟಾಡಿಸಿ ಕೊಂದು ಹಾಕಿದ್ದ ಮುಲ್ಕಿಯ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ನಿವಾಸಿ ಅಲ್ಫೋನ್ಸ್ ಸಲ್ದಾನ (65) ಶಿಕ್ಷೆಗೀಡಾದ ವ್ಯಕ್ತಿ.
2020ರ ಎಪ್ರಿಲ್ 29ರಂದು ಆರೋಪಿ ಆಲ್ಫೋನ್ಸ್ ಸಲ್ದಾನ ಎಂಬಾತ ತನ್ನ ನೆರೆಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾ ಜೊತೆಗೆ ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಮಾಡಿದ್ದ. ಬಳಿಕ ವಿನ್ಸೆಂಟ್ ಡಿಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದ. ಈ ವೇಳೆ, ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನ ಪತ್ನಿ ಶ್ರೀಮತಿ ಹೆಲೆನ್ ಡಿ.ಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಅವರನ್ನೂ ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆಗೈದಿದ್ದ.

ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು, ಅಂದಿನ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಮುಲ್ಕಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್ ಕೆ ಹಾಗೂ ಹೆಚ್ ಸಿ ವಾದಿರಾಜ ಅವರು ತನಿಖೆಗೆ ಸಹಕರಿಸಿರುತ್ತಾರೆ. ಸದ್ರಿ ಪ್ರಕರಣದ ಬಗ್ಗೆ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ವಿಚಾರಣೆ ನಡೆಸಿದ್ದು ಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಅರೋಪಿಗೆ ಜ.19ರಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿರುತ್ತಾರೆ.
ಅಲ್ಲದೆ, ಆರೋಪಿಗೆ 2 ಲಕ್ಷ ರೂ. ದಂಡ ವಿಧಿಸಿದ್ದಾರೆ. ಸಾಕ್ಷಿ ವಿಚಾರಣೆ ಸಮಯ ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಸಂತ್ರಸ್ತರ ಪರ ವಾದ ಮಂಡಿಸಿರುತ್ತಾರೆ.
In a case stemming from a trivial dispute, the II Additional District and Sessions Court in Mangaluru has sentenced a man to life imprisonment for brutally murdering his neighbouring couple five years ago.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm