ಬ್ರೇಕಿಂಗ್ ನ್ಯೂಸ್
23-01-26 05:12 pm Udupi Staffer ಕರಾವಳಿ
ಕಾರ್ಕಳ, ಜ 23: ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ನಡೆದಿದೆ.
ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ತಪ್ಪು ದಿಕ್ಕಿನಲ್ಲಿ ನುಗ್ಗಿದೆ ಎನ್ನಲಾಗಿದೆ. ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ಗಾಡಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ದುರ್ಘಟನೆಯಲ್ಲಿ ತುಫಾನ್‌ನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಇತರ ಆರು ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ನಿವಾಸಿಗಳು ಮತ್ತು ಹಾದಿಹೋಕರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ವಾಹನದೊಳಗೆ ಸಿಲುಕಿದ್ದವರನ್ನು ಹರಸಾಹಸಪಟ್ಟು ಹೊರತೆಗೆದು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಮಿಯಾರು ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
A tragic road accident between a private express bus and a Tufan vehicle claimed three lives and left six others seriously injured near Miyaru Kambalacross in Karkala taluk on Friday afternoon. According to preliminary information, the private bus, which was traveling from Dharmasthala towards Karkala, was allegedly speeding and entered the wrong lane near Miyaru Kambalacross. At the same time, a Tufan vehicle heading from Karkala towards Belthangady was approaching, when the bus rammed into it head-on.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm