ಬ್ರೇಕಿಂಗ್ ನ್ಯೂಸ್
26-01-26 05:05 pm HK News Desk ಕರಾವಳಿ
ಉಡುಪಿ, ಜ.26: ಪ್ರವಾಸಿಗರನ್ನು ವಿಹಾರಕ್ಕೆ ಕೊಂಡೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿದ್ದು ದೋಣಿಯಲ್ಲಿದ್ದ ಮೈಸೂರು ಮೂಲದ ಇಬ್ಬರು ಪ್ರವಾಸಿಗರು ಸಾವನಪ್ಪಿದ ಘಟನೆ ಕುಂದಾಪುರ ಕೋಡಿಬೆಂಗ್ರೆ ಬೀಚ್ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ.
ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತರು. ದಿಶಾ (26) ಎಂಬ ಮಹಿಳೆಯ ಸ್ಥಿತಿ ತೀರಾ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಧರ್ಮರಾಜ (26) ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸುತ್ತಿದ್ದಾರೆ. ಇವರು ಮೈಸೂರು ಜಿಲ್ಲೆಯ ಸರಸ್ವತೀಪುರಂ ಮೂಲದವರಾಗಿದ್ದು, ಅಲ್ಲಿನ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
14 ಮಂದಿಯ ತಂಡ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಇವರು ಕೋಡಿಬೆಂಗ್ರೆ ಡೆಲ್ಟಾ ಬೀಚ್‌ನಿಂದ ಪ್ರವಾಸಿ ದೋಣಿ ಮೂಲಕ ಸಮುದ್ರದಲ್ಲಿ ವಿಹಾರಕ್ಕೆ ಹೊರಟಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಂಗಾರಕಟ್ಟೆ ಶಿಪ್ ಬಿಲ್ಡಿಂಗ್ ಪ್ರದೇಶದ ಸಮೀಪ ನದಿ -ಸಮುದ್ರ ಸೇರುವ ಸ್ಥಳದಲ್ಲಿ ದೋಣಿ ಆಕಸ್ಮಿಕವಾಗಿ ಪಲ್ಟಿಯಾಯಿತು. ದೋಣಿಯಲ್ಲಿದ್ದ 14 ಮಂದಿ ಸಮುದ್ರದ ನೀರಿಗೆ ಬಿದ್ದಿದ್ದು ಇವರಲ್ಲಿ ಕೆಲವರು ಮಾತ್ರ ಲೈಫ್ ಜಾಕೆಟ್ ಧರಿಸಿದ್ದರೆನ್ನಲಾಗಿದೆ. ಕೂಡಲೇ ಇತರ ದೋಣಿಯವರು ನೀರಿಗೆ ಬಿದ್ದವರನ್ನು ರಕ್ಷಿಸಿ ತೀರಕ್ಕೆ ಕರೆದುಕೊಂಡು ಬಂದಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಇವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A tourist boat carrying visitors on a leisure trip capsized in the sea near Kodibengre Beach in Kundapura taluk on Sunday afternoon, resulting in the death of two tourists from Mysuru.The deceased have been identified as Shankarappa (22) and Sindhu (23), both natives of Mysuru. Another tourist, Disha (26), is in critical condition, while Dharmaraj (26) narrowly escaped death and is undergoing treatment. All of them were residents of Saraswathipuram in Mysuru district and were reportedly working at a call centre.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm