ಬ್ರೇಕಿಂಗ್ ನ್ಯೂಸ್
29-01-26 10:38 pm Mangalore Correspondent ಕರಾವಳಿ
ಮಂಗಳೂರು, ಜ.29 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಧ್ವನಿ ಎತ್ತಿದರು.
ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು ಲೊಕೇಶನ್ ಸೆರೆಹಿಡಿದು ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತಿತ್ತು. ಈ ಸರ್ಕಾರ ಯಾವಾಗ ಹೊಸ ತಂತ್ರಾಂಶವನ್ನು ಜಾರಿಗೊಳಿಸಿತೋ ಅಂದಿನಿಂದ ಎಲ್ಲವೂ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಎರಡು ತಿಂಗಳಿನಲ್ಲಿ ಆಗಿರುವ ಇ-ಖಾತಾಗಳ ಸಂಖ್ಯೆ ನೋಡಿದರೆ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ ಸಚಿವರು ಮಾತ್ರ, ಸರ್ವರ್ ಉನ್ನತೀಕರಿಸಲಾಗಿದ್ದು ಯಾವುದೇ ಸಮಸ್ಯೆಯಿಲ್ಲವೆಂದು ಉತ್ತರಿಸಿರುವುದು ದುರಂತವೆಂದರು.
ಅಲ್ಲದೇ ನಗರದಲ್ಲಿ ಪಿಪಿಪಿ ಮಾಡಲ್ ನಲ್ಲಿ ಅಳವಡಿಸಲಾಗಿರುವ ಬೀದಿ ದೀಪಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ. ಹಳೆಯ ದೀಪಗಳು ದುರಸ್ತಿಯಾಗುತ್ತಿಲ್ಲ, ಹೊಸ ದೀಪಗಳು ಅಳವಡಿಸುತ್ತಿಲ್ಲ. ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಬಳಿ ಒಳಚರಂಡಿ ಕಾಮಗಾರಿ ಅಸ್ತವ್ಯಸ್ತಗೊಂಡಿರುವ ಬಗ್ಗೆ ಸ್ಥಳೀಯ ಮಹಿಳೆಯರು ದೂರು ನೀಡುತ್ತಿದ್ದಾರೆ. ಅದು ಸಚಿವರ ಸಹಿತ ಸ್ಪೀಕರ್ ಅವರ ಗಮನಕ್ಕೂ ಬಂದಿದೆ. ನಗರದ ಪ್ರಮುಖ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜಲಸಿರಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ. ಇಂತಹ ಮೊದಲಾದ ಸಮಸ್ಯೆಗಳ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಬೇಕು ಎಂದರು.
MLA Vedavyas Kamath highlighted serious e-Khata issues in Mangaluru City Corporation limits, along with damaged roads, faulty streetlights, drainage problems and delayed projects, urging the state government to take immediate corrective action.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm