ಬ್ರೇಕಿಂಗ್ ನ್ಯೂಸ್
01-02-26 07:52 pm Mangalore Correspondent ಕರಾವಳಿ
ಮಂಗಳೂರು, ಫೆ.1: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡೀಪಾರು ಮಾಡಿ ಆದೇಶಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಕ್ಕೆ ಹೈಕೋರ್ಟ್ ಮತ್ತೊಮ್ಮೆ ತಡೆಯಾಜ್ಞೆ ವಿಧಿಸಿದ್ದು, ವಿವೇಚನೆ ಬಳಸಿ ಮರು ಆದೇಶ ನೀಡುವಂತೆ ಮತ್ತೆ ಸೂಚಿಸಿದೆ.
ಈ ಹಿಂದೆಯೂ ಮಹೇಶ್ ಶೆಟ್ಟಿ ಗಡಿಪಾರಿಗೆ ಪುತ್ತೂರು ವಿಭಾಗಾಧಿಕಾರಿ ಆದೇಶ ನೀಡಿದ್ದರೂ ಹೈಕೋರ್ಟ್ ತಡೆ ಹಾಕಿ ಸರಿಯಾದ ಆದೇಶ ನೀಡಿ ಎಂದು ಎರಡು ತಿಂಗಳ ಹಿಂದೆ ಹೇಳಿತ್ತು. ಆನಂತರ, ಮತ್ತೊಮ್ಮೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ನೀಡಿದ್ದರು. ಆದರೆ ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ವಾದ ಆಲಿಸಿದ ಬಳಿಕ ಮತ್ತೆ ತಡೆ ಹಾಕಲಾಗಿದ್ದು ಎಸಿ ಸ್ಟೆಲ್ಲಾ ವರ್ಗೀಸ್ ಮುಖಭಂಗ ಅನುಭವಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂಬತ್ತು ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಿದ್ದ ಆದೇಶವನ್ನು ಶನಿವಾರ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದೆ. ಇದೇ ವೇಳೆ, ಗಡಿಪಾರು ವಿಚಾರದಲ್ಲಿ ವಿವೇಚನೆ ಬಳಸಿ ಮೂರು ವಾರಗಳಲ್ಲಿ ಹೊಸದಾಗಿ ಆದೇಶ ಮಾಡುವಂತೆ ಉಪ ವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ. ಉಪ ವಿಭಾಗಾಧಿಕಾರಿ ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.
ಉಪ ವಿಭಾಗಾಧಿಕಾರಿ ಮಹೇಶ್ ತಿಮರೋಡಿಗೆ ನೀಡಿರುವ ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಿರುವ ಬಹುತೇಕ ಪ್ರಕರಣಗಳಲ್ಲಿ ತಿಮರೋಡಿ ಖುಲಾಸೆಯಾಗಿದ್ದಾರೆ. ಈ ವಿಚಾರವನ್ನು ಆಕ್ಷೇಪಣೆಯ ಮೂಲಕ ಉಪ ವಿಭಾಗಾಧಿಕಾರಿ ಗಮನಕ್ಕೆ ತರಲಾಗಿದೆ. ಇದನ್ನು ಪರಿಗಣಿಸದೇ ಉಪ ವಿಭಾಗಾಧಿಕಾರಿ ಗಡಿಪಾರು ಆದೇಶ ಮಾಡಿದ್ದಾರೆ. ಇದನ್ನು ರಿಟ್ ಅರ್ಜಿಯ ಮೂಲಕ ಪ್ರಶ್ನಿಸಲಾಗಿದೆ. ವಿವೇಚನೆ ಬಳಸಿ, ಸೂಕ್ತ ಆದೇಶ ಹೊರಡಿಸುವಂತೆ ಈ ಹಿಂದೆ ಸಕ್ಷಮ ನ್ಯಾಯಾಲಯ ಆದೇಶಿಸಿತ್ತು. ಅದಕ್ಕೆ ಅನುಗುಣವಾಗಿ, ತಿಮರೋಡಿಯ ಆಕ್ಷೇಪಣೆಯನ್ನು ಪರಿಗಣಿಸಿ, ವಿವೇಚನೆ ಬಳಸಿ, ಸೂಕ್ತ ಆದೇಶವನ್ನು ಹೊಸದಾಗಿ ಮೂರು ವಾರಗಳಲ್ಲಿ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿ ನ್ಯಾಯಾಲಯವು ಅರ್ಜಿಯನ್ನು ಇತ್ಯರ್ಥಪಡಿಸಿದೆ.
The Karnataka High Court has once again stayed the externment order issued against activist Mahesh Shetty Timarodi by the Puttur Sub-Divisional Officer (SDO), directing the authority to reconsider the matter and pass a fresh order within three weeks.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm