ಬ್ರೇಕಿಂಗ್ ನ್ಯೂಸ್
03-02-26 04:38 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಮಂಗಳೂರು ನಗರ ಸಶಸ್ತ್ರ ದಳದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಹಾವೇರಿ ಮೂಲದ ಮಾರುತಿ ಲಮಾಣಿ(36) ಅವರು ಮೆದುಳಿನ ರಕ್ತಸ್ರಾವಕ್ಕೀಡಾಗಿ ಸಾವನ್ನಪ್ಪಿದ್ದಾರೆ.
ಹೈವೇ ಪೆಟ್ರೋಲಿಂಗ್ ಮಾಡುವ ಕಾರಿನಲ್ಲಿ ಡ್ರೈವರ್ ಆಗಿ ಕರ್ತವ್ಯದಲ್ಲಿದ್ದ ಮಾರುತಿ ಲಮಾಣಿ ಭಾನುವಾರ ಬೆಳಗ್ಗೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು. ಇವರ ಪತ್ನಿ ಕದ್ರಿ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿದ್ದು ಕರ್ತವ್ಯಕ್ಕೆ ತೆರಳಿದ್ದರು. ಮನೆಗೆ ತೆರಳಿ ಮಲಗಿದ್ದಾಗ ಮಾರುತಿ ಅಸ್ವಸ್ಥರಾಗಿದ್ದು ಬಳಿಕ ಸ್ಥಳೀಯರು ಸೇರಿ ಎಜೆ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಪರೀಕ್ಷಿಸಿ ಮೆದುಳಿನಲ್ಲಿ ರಕ್ತಸ್ರಾವ ಆಗಿದ್ದು ಶಸ್ತ್ರಚಿಕಿತ್ಸೆ ಸಾಧ್ಯವಿಲ್ಲ ಎಂದಿದ್ದರು. ಎರಡು ದಿನ ಆಸ್ಪತ್ರೆಯಲ್ಲಿದ್ದ ಅವರು ಇಂದು ಬೆಳಗ್ಗೆ ಅಸುನೀಗಿದ್ದಾರೆ.
ಮಾರುತಿ ಸಿಎಆರ್ ಯುನಿಟ್ ನಲ್ಲಿ 9 ವರ್ಷಗಳಿಂದ ಕೆಲಸ ಮಾಡುತ್ತಿದ್ದು ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದಿದ್ದರು. ಪ್ರತಿ ವರ್ಷ ಪೊಲೀಸ್ ಇಲಾಖೆಯಲ್ಲಿ ಡಿಸೆಂಬರ್ ವೇಳೆಗೆ ಮೆಡಿಕಲ್ ಚೆಕಪ್ ನಡೆಯುತ್ತದೆ. ಮಾರುತಿ ಬಿಪಿಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಡಿಸೆಂಬರ್ ಚೆಕಪ್ ವೇಳೆಗೆ ಬಿಪಿ ನಾರ್ಮಲ್ ಕಂಡುಬಂದಿದ್ದರಿಂದ ಮಾತ್ರೆ ನಿಲ್ಲಿಸಿದ್ದರು ಎನ್ನಲಾಗಿದೆ. ಅವರಿಗೆ ಬೇರೆ ಯಾವುದೇ ತೊಂದರೆ ಇರಲಿಲ್ಲ. ಮದುವೆಯಾಗಿ ಐದು ವರ್ಷವಾಗಿದ್ದು ನಾಲ್ಕು ಮತ್ತು ಒಂದುವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
Maruti Lamani (36), a Head Constable in Mangaluru City Armed Reserve (CAR), passed away due to a brain hemorrhage. He reportedly fell ill at home after completing duty and was admitted to AJ Hospital, where doctors said surgery was not possible. He had been serving in the CAR unit for nine years and is survived by his wife, also a constable, and two young daughters.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am