ಬ್ರೇಕಿಂಗ್ ನ್ಯೂಸ್
04-02-26 09:34 pm Mangalore Correspondent ಕರಾವಳಿ
ಮಂಗಳೂರು, ಫೆ.4: ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಗಿ ನೀಡುವ ತಂತ್ರಾಂಶವು ಸ್ಥಗಿತಗೊಂಡ ಪರಿಣಾಮ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದ ಬಗ್ಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಮನವಿಗೆ ಸ್ಪಂದಿಸಿದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯು ಸಮಸ್ಯೆಯನ್ನು ಬಗೆಹರಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ಏಕಾಏಕಿ ನಿರ್ಮಾಣ- 2 ತಂತ್ರಾಂಶವನ್ನು ಸ್ಥಗಿತಗೊಳಿಸಿ ಯುನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಯುಎಲ್ಎಂಎಸ್) ಅನ್ನು ಜಾರಿಗೆ ತಂದಿದ್ದೇ ಸಮಸ್ಯೆಗೆ ಕಾರಣವಾಗಿದ್ದು, ಹಳೆಯ ನಿರ್ಮಾಣ- 2 ತಂತ್ರಾಂಶ ಸಹಿತ ಹೊಸ ಯುಎಲ್‌ಎಂಎಸ್ ತಂತ್ರಾಂಶವೂ ಇಲ್ಲವಾಗಿ ಜನರಿಗೆ ಕಟ್ಟಡ ಪರವಾನಗಿ ಸಿಗದೇ ಪರದಾಡುವಂತಾಗಿತ್ತು. ಇದರಿಂದಾಗಿ ಮನೆ, ಅಪಾರ್ಟ್‌ಮೆಂಟ್, ವಾಣಿಜ್ಯ ಸೇರಿದಂತೆ ಎಲ್ಲಾ ರೀತಿಯ ಕಟ್ಟಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದ ಸಾವಿರಾರು ಮಂದಿ ತಿಂಗಳುಗಟ್ಟಲೆ ಕಾಯುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ, ಕಟ್ಟಡ ಗುತ್ತಿಗೆದಾರರು, ಎಂಜಿನಿಯರ್ ಗಳು, ಕೂಲಿ ಕಾರ್ಮಿಕರಿಗೂ ಬಹಳಷ್ಟು ಸಮಸ್ಯೆಯಾಗಿತ್ತು ಎಂದು ಶಾಸಕ ಕಾಮತ್ ಅವರು ನಗರಾಭಿವೃದ್ಧಿ ಕಾರ್ಯದರ್ಶಿ ಮತ್ತು ಪೌರಾಡಳಿತ ಇಲಾಖೆಯ ನಿರ್ದೇಶಕರ ಗಮನಕ್ಕೆ ತಂದಿದ್ದರು.
ಇದೀಗ ಲ್ಯಾಂಡ್ ಅಂಡ್ ಬಿಲ್ಡಿಂಗ್ ಪ್ಲಾನ್ ಎಪ್ರೂವಲ್ ಸಿಸ್ಟಮ್ (ಎಲ್ ಬಿಪಿಎಎಸ್) - ನಿರ್ಮಾಣ - 2 ತಂತ್ರಾಂಶವನ್ನು ಅಡಿಟ್ ಪೂರ್ಣಗೊಳಿಸಿ ಮರು ಜಾರಿಗೆ ತರಲಾಗಿದ್ದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಿಕೊಳ್ಳುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರಾಡಳಿತ ಇಲಾಖೆ ಆದೇಶ ಮಾಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಶಾಸಕರು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದ್ದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಅಲ್ಲದೇ ನೂತನ ತಂತ್ರಾಂಶದಲ್ಲಿ ಡಿಪ್ಲೋಮಾ ಸಿವಿಲ್ ಎಂಜಿನಿಯರ್‌ಗಳನ್ನು ಸೂಪರ್‌ವೈಸರ್ ಎಂದು ಉಲ್ಲೇಖಿಸಿರುವುದರಿಂದ ಅನುಭವಿ ವೃತ್ತಿಪರ ಎಂಜಿನಿಯರ್‌ಗಳ ಸಹಿತ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆ ಪದದ ಬದಲು ಸಿವಿಲ್ ಎಂಜಿನಿಯರ್ಸ್ ಪದ ಬಳಸುವ ಬಗ್ಗೆಯೂ ಶಾಸಕರು ಗಮನಕ್ಕೆ ತಂದಿದ್ದು ಮುಂದಿನ ದಿನಗಳಲ್ಲಿ ಆ ಬಗ್ಗೆಯೂ ಸಮಸ್ಯೆ ಇತ್ಯರ್ಥವಾಗುವ ಸಾಧ್ಯತೆಗಳಿವೆ. ಶಾಸಕರು ಮನವಿ ನೀಡಿದ ಸಂದರ್ಭದಲ್ಲಿ ಇಂಜಿನಿಯರ್ ಗಳಾದ ಜಿ.ಯೋಗೀಶ್ ಪೈ, ಮೊಹಮ್ಮದ್ ಇಕ್ಬಾಲ್ ಉಪಸ್ಥಿತರಿದ್ದರು.
The Urban Development and Municipal Administration Department has resolved technical issues that had stalled building permit approvals across Karnataka for the past two months, following intervention by Mangaluru South MLA D. Vedavyasa Kamath.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm