ಬ್ರೇಕಿಂಗ್ ನ್ಯೂಸ್
04-02-26 10:15 pm Mangalore Correspondent ಕರಾವಳಿ
ಮಂಗಳೂರು, ಫೆ.4: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ, ಬಸ್ ಆಕೆಯ ಹೊಟ್ಟೆಯ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ.


ಸ್ಕೂಟರ್ ಸವಾರನಾಗಿದ್ದ ಯುವಕ ಅಪಾಯದಿಂದ ಪಾರಾಗಿದ್ದಾನೆ. ನಂತೂರು ಬಳಿಯ ಬಸ್ ನಿಲ್ದಾಣ ಎದುರಲ್ಲೇ ಘಟನೆ ನಡೆದಿದ್ದು ಕುಡುಪು ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್ ಡಿಕ್ಕಿಯಾಗಿದೆ. ಬಸ್ ವೇಗವಾಗಿತ್ತೇ, ಸ್ಕೂಟರ್ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಗೊತ್ತಾಗಿಲ್ಲ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಮತ್ತು ಯುವಕ ವಾಮಂಜೂರಿನಲ್ಲಿ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದರೆಂದು ತಿಳಿದುಬಂದಿದೆ.
A 26-year-old woman was killed in a tragic road accident near Nanthoor Circle in the city after a private bus collided with a scooter and ran over her. The deceased has been identified as Deepthi (26), a resident of Ballalbagh. She was travelling on a scooter with her fiancé from Shivabagh towards Vamanjoor when the accident occurred. A private bus travelling from Kadri Shivabagh towards Nanthoor allegedly hit the scooter near a bus stop at Nanthoor Circle.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm