ಬ್ರೇಕಿಂಗ್ ನ್ಯೂಸ್
05-02-26 10:01 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಮಹತ್ತರ ಬೆಳವಣಿಗೆಯಲ್ಲಿ ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ವಂಚಿಸುತ್ತಿದ್ದ ಸೈಬರ್ ವಂಚಕರ ತಂಡವೊಂದನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸರು ಪತ್ತೆಹಚ್ಚಿದ್ದು ನೇಪಾಳಿ ಪೊಲೀಸರ ಸಹಾಯದಲ್ಲಿ ಒಟ್ಟು 11 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೀನಾ ಮೂಲದ ವಂಚಕರಿದ್ದು, ನೇಪಾಳ ಪೊಲೀಸರ ನೆರವಿನಿಂದ ವಂಚಕರ ನೆಟ್ವರ್ಕ್ ಬೇಧಿಸಲಾಗಿದೆ. ಐವರು ಭಾರತೀಯ ಮೂಲದ ಆರೋಪಿಗಳು ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.
ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಸದ್ರಿ ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದೆ, ಇದರಲ್ಲಿ ಒಂದು ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ಬಳಕೆ ಮಾಡಿದ್ದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ. 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆಯಬೇಕಾಗಿದೆ.


ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ 02/2026 ಕಲಂ 66(ಸಿ), 66(ಡಿ), ಐಟಿ ಕಾಯ್ದೆ ಕಲಂ 318(4), 308(5) ಬಿಎನ್ ಎಸ್ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಂದ 1 ಕೋಟಿ 38 ಲಕ್ಷ ಹಣವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸದ್ರಿ ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆಹಚ್ಚಲಾಗಿತ್ತು.
ವಂಚಕರ ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟರನ್ನು ನೇಮಕ ಮಾಡಿಕೊಂಡು, ವಂಚನೆಯ ಹಣವನ್ನು ಯುಎಸ್ ಡಾಲರ್ ನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಿದ್ದರು. ಇನ್ನೊಂದು ವಂಚಕರ ತಂಡವು ಕಾಂಬೋಡಿಯಾ ಮತ್ತು ಇತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಹಣ ಗಳಿಸುವ ಆಮಿಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದರು. ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ. ವಂಚಕರು ಹಣ ವರ್ಗಾವಣೆಗಾಗಿ ಬಳಸಿದ್ದ 10 ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ NCRP - PORTAL ನಲ್ಲಿ ಸುಮಾರು 128 ಪ್ರಕರಣಗಳು ಮತ್ತು ಒಟ್ಟು 36 ಎಫ್ಐಆರ್ ದಾಖಲಾಗಿರುತ್ತದೆ.
ದಸ್ತಗಿರಿಯಾದ ಆರೋಪಿಗಳು
ಗುಜರಾತ್ ಬಾವಾ ನಗರ್ ಜಿಲ್ಲೆ ನಿವಾಸಿ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್ ಸಿಂಗಬುಮ್ ಜಿಲ್ಲೆಯ ಪುಪ್ಲ ಶಿವ ಕುಮಾರ್ ರಾವ್ (32), ಉತ್ತರ ಪ್ರದೇಶದ ಮಾವೋ ಜಿಲ್ಲೆ ನಿವಾಸಿ ಗೌರವ್ ಪಾಂಡೆ (24), ಉತ್ತರ ಪ್ರದೇಶದ ಸುಲ್ತಾನ್ ಪುರ್ ಜಿಲ್ಲೆ
ಹರ್ಷ್ ಮಿಸ್ರಾ (22), ಜಾರ್ಖಂಡಿನ ರಾಜೇಶ್ ಮಂಡನ್ (30), ಲಕ್ನೋ ಮೂಲದ ಮೊಹಮ್ಮದ್ ಆಕೀಬ್ ಅಲಿ (27), ಬಿಹಾರ ನಲಂದಾ ಜಿಲ್ಲೆಯ ರಾಜೀವ್ ರಂಜನ್ ಕುಮಾರ್ (30), ಜಾರ್ಖಂಡಿನ ಮಿಥುನ್ ಕುಮಾರ್ ಮಂಗರಾಜ್ (38), ಝಾನ್ಸಿ ಮೂಲದ ನೌಶಾದ್ ಅಲಿ (34), ರಾಜಸ್ಥಾನ ಜೈಪುರದ ಓಂ ಪ್ರಕಾಶ್ ಯಾಧವ್ (37) ಬಂಧಿತರು. ಇವರಿಂದ ಲ್ಯಾಪ್ ಟಾಪ್ -1, ಮೊಬೈಲ್ ಪೋನ್ ಗಳು-21, ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು - 20, ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳು – 20 ವಶಕ್ಕೆ ಪಡೆಯಲಾಗಿದೆ.
ಕೆಲಸಕ್ಕೆ ಕರೆಸಿಕೊಂಡು ವಂಚನೆಗೆ ಬಳಕೆ
ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ತಮ್ಮ ನಿಜವಾದ ಹೆಸರುಗಳನ್ನು ಮರೆಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, Management Operator ಗಳು ಮತ್ತು OTP Worker ರವರು ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್ಸಾಟ್ರಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ. ಕೆಲಸಕ್ಕಾಗಿ ಅವರನ್ನು ಸಂಪರ್ಕಿಸಿದಾಗ 5% ರಿಂದ 10% ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೆಟ್, ಕ್ಯಾಬ್ ಬುಕಿಂಗ್, ಹೊಟೇಲ್, ಲಾಡ್ಜ್ ವ್ಯವಸ್ಥೆ ನೀಡುವುದಾಗಿ ಹಾಗೂ ವಿವಿಧ ರೀತಿಯ ಆಮಿಷಗಳನ್ನು ನೀಡಿ ದುಬೈ, ನೇಪಾಳ ಮುಂತಾದ ಕಡೆಗಳಿಗೆ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರನ್ನು ಮತ್ತು ಖಾತೆಗಳನ್ನು ಪೂರೈಸುವವರನ್ನು ಒಂದು ನಿರ್ದಿಷ್ಟ ಸ್ಥಳದಲ್ಲಿ ವ್ಯವಸ್ಥೆ ಮಾಡುತ್ತಾರೆ. ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್ ಗಳಿಗೆ ಖಾತೆದಾರರ ಸಿಮ್ ಗಳನ್ನು ಹಾಕಿಕೊಂಡು, Net Banking, ಮುಖಾಂತರ ವಂಚನೆಯ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚಕರು ವಂಚನೆ ಮಾಡಿದ ಹಣದಿಂದ USDT ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ, ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ.

ಹೂಡಿಕೆದಾರರನ್ನು ಆಕರ್ಷಿಸುವ ವಿಧಾನ
ಕಾಂಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು, ನಮ್ಮ ದೇಶದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸಾಪ್ ಮೊಬೈಲ್ ನಂಬ್ರಗಳ ಮೂಲಕ ಇನ್ ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್ ಬುಕ್ ಮುಖಾಂತರ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಾಂಶ ನೀಡುವುದಾಗಿ ಆರ್ಕಷಿಸುತ್ತಾರೆ. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭ ಬಂದಿರುವುದಾಗಿ ಆಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾಣದ ಲಾಭದ ಹಣವನ್ನು ನೀಡಿ ನಂಬಿಕೆ ಬರುವಂತೆ ಮಾಡಿ ನಂತರ ಹೆಚ್ಚಿನ ಹಣವನ್ನು ಹೂಡಿಕೆ ಮಾಡಲು ಪುಸುಲಾಯಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು 60 ಲಕ್ಷದಿಂದ ಒಂದು ಕೋಟಿಯ ವರೆಗೆ Investment fraud ಗೆ ಒಳಪಡಿಸುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಡಿಜಿಟಲ್ ಸ್ಲೇವರಿ ಬಗ್ಗೆ ಎಚ್ಚರವಿರಲಿ
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲಿ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ ಅವರನ್ನು ಟೂರಿಸ್ಟ್ ವೀಸಾದಲ್ಲಿ ಕರೆಸಿಕೊಂಡು ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿನ ನಿಗೂಢ ಸ್ಥಳದಲ್ಲಿ ಬಂಧಿಸುತ್ತಾರೆ. ಅವರನ್ನು ಬಳಸಿಕೊಂಡು ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಯಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೆ, ಕುಟುಂಬದವರೊಂದಿಗೆ ಸಂಪರ್ಕಿಸಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತೀಯರನ್ನು ಟಾರ್ಗೆಟ್ ಮಾಡಲು ಬಳಸುತ್ತಿದ್ದರು. ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.


ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೋಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕವಷ್ಟೇ ವಿದೇಶಕ್ಕೆ ಹೋಗುವುದು ಉತ್ತಮ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 06 ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.
ವಂಚಕರು ವಂಚನೆಯಾದ ಹಣದಲ್ಲಿ ಆನ್ಲೈನ್ ಮೂಲಕ USDT ಗಳನ್ನು ಖರೀದಿ ಮಾಡಿಕೊಂಡು ಅದೇ ದಿನ ಬೇರೆ ದೇಶಗಳಿಗೆ ಕಳುಹಿಸುವುದರಿಂದ ಹಣ ವಿದೇಶಕ್ಕೆ ರವಾನೆಯಾಗುತ್ತದೆ. ಈ ವೇಳೆ, ವಂಚನೆಗೊಳಗಾದವರು ದೂರು ನೀಡಲು ವಿಳಂಬ ಮಾಡುವುದರಿಂದ ಹಣ ಮರಳಿ ಸಿಗುವುದು ಕಷ್ಟವಾಗುತ್ತದೆ.

ಬ್ಯಾಂಕ್ ಖಾತೆ ನೀಡುವಾಗ ಎಚ್ಚರ
ಕಮಿಷನ್ ಆಸೆಗಾಗಿ ಬ್ಯಾಂಕ್ ಖಾತೆಯನ್ನು ವಂಚಕರಿಗೆ ನೀಡಿದಲ್ಲಿ ಖಾತೆದಾರರು ಸಹ ಆರೋಪಿತರಾಗುತ್ತಾರೆ. ಮುಖ್ಯ ವಂಚಕರು ವಿದೇಶದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದರಿಂದ ಪ್ರಮುಖ ಆರೋಪಿಗಿಂತ ಮೊದಲೇ ಕಮಿಷನ್ ಆಸೆಗೆ ಒಳಗಾದವರು ಕಾನೂನು ಪ್ರಕಾರ ಶೀಘ್ರವಾಗಿ ದಸ್ತಗಿರಿಯಾಗುತ್ತಾರೆ.
ವಿದೇಶದಲ್ಲಿ ಕುಳಿತು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯ ಆಕರ್ಷಕ ಜಾಹೀರಾತುಗಳನ್ನು ನೋಡಿ, ಹೆಚ್ಚಿನ ಲಾಭಾಂಶದ ವಂಚನೆಗೆ ಒಳಗಾಗಬೇಡಿ. ಹಾಗೂ ಹೂಡಿಕೆಯನ್ನು ಮಾಡುವಾಗ ನಕಲಿ ಸೆಬಿ ಸರ್ಟಿಪೀಕೇಟ್, ನಕಲಿ ಡಿಮೇಟ್ ಖಾತೆಗಳನ್ನು ನೋಡಿ ಮೋಸ ಹೋಗಬೇಡಿ. ಹೆಚ್ಚು ಹಣ ಗಳಿಸಬೇಕೆಂಬ ಆಸೆಗೆ ಬಿದ್ದ ಹೆಚ್ಚಿನ ವಿದ್ಯಾವಂತರು ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಹೂಡಿಕೆ, ಹಣ ದ್ವಿಗುಣ, ಟ್ರೇಡಿಂಗ್ ಹೂಡಿಕೆಯಲ್ಲಿ ವಿಚಾರಿಸದೇ ವಂಚಕರ ಮೋಸದ ಬಲೆಗೆ ಬಿದ್ದು, ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ. ಹೂಡಿಕೆ ಮಾಡಬೇಕಾದರೆ SEBI Registration ಆಗಿರುವ ಸಂಸ್ಥೆ ಅಥವಾ ಬ್ರೋಕರ್ ಅವರಲ್ಲಿ ಡಿಮ್ಯಾಟ್ ಮತ್ತು ಟ್ರೇಡಿಂಗ್ ಅಕೌಂಟ್ ಮಾಡಿಸುವುದು. ಹೆಚ್ಚಿನ ಲಾಭಾಂಶ ಭರವಸೆಯ ಹೂಡಿಕೆ ಬಗ್ಗೆ ಅತೀ ಹೆಚ್ಚಿನ ಕಾಳಜಿ ಅವಶ್ಯವಾಗಿದೆ.
ಸೈಬರ್ ವಂಚನೆಗೆ ಪರಿಹಾರಗಳು
In a major breakthrough, Mangaluru City CEN Crime Police have busted a large-scale international cyber fraud network operating from Nepal and targeting Indian citizens. With assistance from Nepal Police, 11 accused — including Indian nationals and foreign operatives — have been arrested, while five suspects remain absconding.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm