ಬ್ರೇಕಿಂಗ್ ನ್ಯೂಸ್
08-02-26 11:17 pm HK News Desk ಕರಾವಳಿ
ಬೆಂಗಳೂರು, ಫೆ.8 : ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂಬ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸಲು ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸಿಬಿಐ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ಹೊರಡಿಸಿದ್ದ ತೀರ್ಪಿನ ಆದೇಶ ಜಾರಿಗೊಳಿಸಲು ಸಿಬಿಐಗೆ ನಿರ್ದೇಶಿಸುವಂತೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಎಂ.ಆರ್. ಬಾಲಕೃಷ್ಣ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಗೃಹ ಇಲಾಖೆ, ಪೊಲೀಸ್ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಪಶ್ಚಿಮ ವಿಭಾಗದ ಪೊಲೀಸ್ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ ದೆಹಲಿ ಮತ್ತು ಚೆನ್ನೈ ವಿಭಾಗದ ವಿಶೇಷ ತನಿಖಾ ದಳಕ್ಕೆ ನೋಟಿಸ್ ಜಾರಿಗೊಳಿಸಿ, ಫೆಬ್ರವರಿ 23ಕ್ಕೆ ವಿಚಾರಣೆ ಮುಂದೂಡಿದೆ.
2012ರಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಗಿಡಾದ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾ ಪ್ರಕರಣವನ್ನು 2013ರಲ್ಲಿ ಸಿಬಿಐ ತನಿಖೆಗೆ ವಹಿಸಿದ್ದು, 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ತನಿಖೆ ಬಳಿಕ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ. ಸಂತೋಷ್ ಅವರು ಪ್ರಕರಣದ ಆರೋಪಿಯೆಂದು ಗುರುತಿಸಿದ್ದ ಸಂತೋಷ ರಾವ್ ನನ್ನು ಅತ್ಯಾಚಾರ (ಐಪಿಸಿ ಸೆಕ್ಷನ್ 376) ಮತ್ತು ಕೊಲೆ (ಐಪಿಸಿ ಸೆಕ್ಷನ್ 302) ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಅಲ್ಲದೇ, 11 ವರ್ಷಗಳಿಂದ ಜೈಲಿನಲ್ಲಿದ್ದ ಸಂತೋಷ್ ರಾವ್‌ನನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸಿತ್ತು.
ಇದೇ ವೇಳೆ, ಕಳಪೆ ಮತ್ತು ದೋಷಪೂರಿತ ತನಿಖೆ ನಡೆಸಿರುವ ಮತ್ತು ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಈ ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ನಿರ್ದೇಶಿಸಿದ್ದರು. ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷಿ ಸಂಗ್ರಹಿಸಲು ವಿಫಲವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ನಡುವೆ, ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
The Karnataka High Court has issued notices to the Central Bureau of Investigation (CBI) and the Karnataka State Government on a petition seeking implementation of an order passed by the CBI Special Court in the Soujanya murder case, which had called for action against officials responsible for a defective investigation.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm