ಬ್ರೇಕಿಂಗ್ ನ್ಯೂಸ್
11-02-26 03:45 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಮಂಗಳೂರು - ಮೂಡುಬಿದ್ರೆ ಹೆದ್ದಾರಿಯ ಎಡಪದವು ಸಮೀಪದ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಹಾಲಿ ಇರುವ ಹಳೆ ರಸ್ತೆ ಘನ ವಾಹನಗಳ ಓಡಾಟದಿಂದ ಬಿರುಕು ಬಿಟ್ಟಿದೆ. ಅಪಾಯ ಕಂಡುಬಂದಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆಬ್ರವರಿ 12 ರಿಂದ ಮಾರ್ಚ್ 13-ರ ವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಸಲಿದ್ದು ಸದ್ರಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಸೂಚಿಸಲಾಗಿದೆ.





ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಟಿಯಿಂದ ಮಂಗಳೂರು - ಮೂಡಬಿದ್ರೆ ನಡುವೆ ಸಂಚರಿಸುವ ವಾಹನಗಳು ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಲು ಸೂಚಿಸಲಾಗಿದೆ.
ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.
ಅಧಿಕಾರಿಗಳ ಅಸಡ್ಡೆಗೆ ಜನರಿಗೆ ಹೊರೆ !
ಎಡಪದವು ಬಳಿಯ ಏರು ರಸ್ತೆ ಇರುವಲ್ಲಿ ಹೊಸ ಹೆದ್ದಾರಿ ಮಾಡುವುದಕ್ಕಾಗಿ ಪ್ರಪಾತ ರೀತಿ ಅಗೆಯಲಾಗಿದೆ. ಕಳೆದ ಬೇಸಗೆಯಲ್ಲಿ ಅಲ್ಲಿ ಕೆಂಪು ಕಲ್ಲು ತೆಗೆದು ಮಾರಾಟ ಮಾಡಲಾಗಿತ್ತು. ಮೇಲ್ಭಾಗದಲ್ಲಿ ರಸ್ತೆ ಇದ್ದರೂ ಅದರ ಅಂಚಿನ ವರೆಗೂ ಅಗೆದಿದ್ದರಿಂದ ಈಗ ಕುಸಿತವಾಗಿದೆ. ಹೆದ್ದಾರಿ ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಕುಸಿಯುತ್ತಿರುವ ಕಾರಣ ಹಳೆ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು- ಮೂಡುಬಿದ್ರೆ ಸಂಪರ್ಕಕ್ಕೆ ಪ್ರಯಾಣಿಕ ವಾಹನಗಳು ಸುತ್ತು ಬಳಸಿ ಹೋಗುವಂತಾಗಿದೆ. ಇಲ್ಲಿ ರಸ್ತೆ ಕುಸಿಯಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕಿದೆ.
Due to excavation work for a new highway near Machoor Cross at Edapadavu, the existing Mangaluru–Moodbidri road has developed cracks and become unsafe for heavy vehicles. The National Highways Authority has announced a 30-day closure from February 12 to March 13, with traffic diverted through alternate routes.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm