ಬ್ರೇಕಿಂಗ್ ನ್ಯೂಸ್
01-01-21 04:04 pm Mangalore Correspondent ಕರಾವಳಿ
ಮಂಗಳೂರು, ಜ.1 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಲ್ಲಿ ಭಾರೀ ಮೊತ್ತದ ಸಾರ್ವಜನಿಕ ಹಣ ದುರುಪಯೋಗವಾಗುತ್ತಿದೆ. ಕಳಪೆ ಕಾಮಗಾರಿಯಿಂದ ಕೋಟ್ಯಂತರ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ, ಮುಖ್ಯ ಸಚೇತಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರದ ರಥಬೀದಿಯಲ್ಲಿ ನಿರ್ಮಿಸಿದ ಕಾಂಕ್ರಿಟ್ ರಸ್ತೆ ನಿರ್ಮಾಣಗೊಂಡ ಎರಡೇ ತಿಂಗಳಲ್ಲಿ ಬಿರುಕು ಬಿಟ್ಟಿದೆ. ಕೆಲವು ಕಡೆ ಬಿರುಕು ಬಿಟ್ಟ ಕಾಂಕ್ರಿಟ್ ರಸ್ತೆಗಳಿಗೆ ತೇಪೆ ಹಾಕಲಾಗಿದೆ. ನಗರ ಭಾಗದಲ್ಲಿ ನಡೆಯುವ ಕಾಂಕ್ರೀಟ್ ರಸ್ತೆಗಳ ಸ್ಥಿತಿ ಹೀಗಾದರೆ ಹೇಗೆ? ಕಳಪೆ ಕಾಮಗಾರಿ ನಡೆಸಿರುವುದಕ್ಕೆ ಇದು ಸಾಕ್ಷ್ಯವಾಗಿದೆ. ಅಲ್ಲದೆ, ಕಾಮಗಾರಿಗಳ ಗುತ್ತಿಗೆ ನೀಡುವ ಸಂದರ್ಭದಲ್ಲೂ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಹೇಳಿದರು.
ಒಂದೂವರೆ ಕೋಟಿ ರೂ. ವೆಚ್ಚದ ಕಾಮಗಾರಿ ವ್ಯರ್ಥ
ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ನೆಪದಲ್ಲಿ ನೆಹರು ಮೈದಾನದಲ್ಲಿ ಮಾರುಕಟ್ಟೆ ನಿರ್ಮಿಸಲು ಸುಮಾರು ಒಂದೂವರೆ ಕೋಟಿ ರೂ. ವ್ಯಯ ಮಾಡಲಾಗಿದೆ. ಆದರೆ ಈ ಮೈದಾನವನ್ನು ಫುಟ್ಬಾಲ್ ಮೈದಾನವಾಗಿ ಉಳಿಸಿಕೊಳ್ಳಬೇಕು, ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರಿಂದ ಕೋಟ್ಯಂತರ ರೂ. ಸಾರ್ವಜನಿಕ ಹಣ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಪೋಲಾದಂತಾಗಿದೆ. ಇದು ಮಾತ್ರವಲ್ಲದೆ ನಗರದ ವಿವಿಧ ಕಡೆ ನಡೆಯುತ್ತಿರುವ ಕಾಮಗಾರಿಗಳೂ ಸರಿಯಾಗಿಲ್ಲ ಎಂದು ಅಬ್ದುಲ್ ರವೂಫ್ ದೂರಿದರು.
ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತ
ಸೂಕ್ತ ಮಾನದಂಡ ಪಾಲಿಸದ ಕಾರಣಕ್ಕೆ ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಂಡಿದೆ. ವೆನ್ಲಾಕ್ ಆಸ್ಪತ್ರೆ ಬಳಿಯ ಕಾಮಗಾರಿಗಳು ಸ್ಥಗಿತಗೊಂಡಿದ್ದು ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ಬರುವವರಿಗೂ ಸಮಸ್ಯೆ ಉಂಟಾಗುತ್ತಿದೆ. ಕೋಟ್ಯಂತರ ರೂ. ಮೊತ್ತವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ವ್ಯಯ ಮಾಡುತ್ತಿರುವ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದು ಸಾರ್ವಜನಿಕ ಹಣದ ದುರುಪಯೋಗ ಆಗುವುದಕ್ಕೆ ಕಾರಣವಾಗಿದೆ ಎಂದು ಅಬ್ದುಲ್ ರವೂಫ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯರಾದ ಶಶಿಧರ ಹೆಗ್ಡೆ, ಭಾಸ್ಕರ ಕೆ., ಲ್ಯಾನ್ಸ್ ಲೋಟ್ ಪಿಂಟೋ, ನವೀನ್ ಡಿಸೋಜ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಕೇಶವ ಮರೋಳಿ, ಝೀನತ್ ಸಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.
Opposition leader Abdul Rauf of Mangaluru City Corporation said, “The district administration has completely failed in undertaking Smart City works.”
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm