ಬ್ರೇಕಿಂಗ್ ನ್ಯೂಸ್
16-02-26 11:02 pm HK Desk ಕರಾವಳಿ
ಕೊಪ್ಪಳ, ಫೆ.16: ಹಂಪಿ ಹತ್ತಿರ ನಡೆದ ಘೋರ ಹತ್ಯೆ-ಅತ್ಯಾಚಾರ ಪ್ರಕರಣದಲ್ಲಿ ಗಂಗಾವತಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇಸ್ರೇಲ್ ಹಾಗೂ ಭಾರತ ಮೂಲದ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಅಮೆರಿಕ ಮೂಲದ ಪ್ರವಾಸಿಗನ ಹತ್ಯೆ ಸಂಬಂಧಿಸಿದ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಗಂಗಾವತಿ ನ್ಯಾಯಾಲಯವು ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ತೀರ್ಪು ಪ್ರಕಟಿಸಿ, ಇಂತಹ ಕ್ರೂರ ಅಪರಾಧಗಳಿಗೆ ಸಮಾಜದಲ್ಲಿ ಯಾವುದೇ ಸ್ಥಳವಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಐವರು ಪ್ರವಾಸಿಗರು ಆನೆಗೊಂದಿಯ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಮಾ.6 ರಂದು ರಾತ್ರಿ ಊಟ ಮುಗಿಸಿ ಸುತ್ತಾಡಲು ಹೊರಗೆ ತೆರಳಿದ್ದರು. ಸಣಾಪೂರ ಕೆರೆಯ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಯ ಬಳಿ ಹೋಗಿ ಸಂಗೀತ ಆಲಿಸುತ್ತಾ ಕುಳಿತಾಗ ಮೂವರು ದುಷ್ಕರ್ಮಿಗಳು ಹಣ ಕಳ್ಳತನ ಮಾಡುವ ಉದ್ದೇಶದಿಂದ ಬಂದು ಗಲಾಟೆ ನಡೆಸಿದ್ದರು.
ಮದ್ಯದ ಅಮಲಿನಲ್ಲಿದ್ದ ದುಷ್ಕರ್ಮಿಗಳು ಮೂವರು ಪುರುಷರ ಮೇಲೆ ಹಲ್ಲೆ ನಡೆಸಿ ಕೆರೆಗೆ ತಳ್ಳಿದ್ದರು. ಜೊತೆಗೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆರೆಗೆ ಬಿದ್ದ ಮೂವರ ಪೈಕಿ ಇಬ್ಬರು ದಡಕ್ಕೆ ಸೇರಿದ್ದು, ಇನ್ನೋರ್ವನ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ದಡಕ್ಕೆ ಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಮೃತದೇಹ 24 ಗಂಟೆಗಳ ನಂತರ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.
ಕೊಲೆಯಾದ ಪ್ರವಾಸಿಯನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿತ್ತು. ಜರ್ಮನ್ ದೇಶದ ಡೇನೈಲ್ ಹಾಗೂ ಮಹಾರಾಷ್ಟ್ರ ಮೂಲದ ಪಂಕಜ್ ಗಾಯಗೊಂಡಿದ್ದರು. ಅತ್ಯಾಚಾರಕ್ಕೀಡಾದವರು ಓರ್ವ ಇಸ್ರೇಲ್ ಮಹಿಳೆ ಹಾಗೂ ಒಬ್ಬಳು ಭಾರತದ ಮಹಿಳೆ ಎಂದು ತಿಳಿದುಬಂದಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಹಂಪಿ ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರುವಂತಾಗಿತ್ತು.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಂತರ ನ್ಯಾಯಾಲಯವು ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm