ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm