ಬ್ರೇಕಿಂಗ್ ನ್ಯೂಸ್
20-02-26 06:05 pm Mangalore Correspondent ಕರಾವಳಿ
ಮಂಗಳೂರು, ಫೆ.20: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಎಸಿ ಕುರಿಯನ್ ಎಂಬವರ ಅಡಿಕೆ ತೋಟದಲ್ಲಿ ಮೇಲ್ವಿಚಾರಕನಾಗಿದ್ದ ಶ್ರೀಧರ ಮುಗೇರ ಕೊಲೆ ಪ್ರಕರಣದಲ್ಲಿ ಮರು ತನಿಖೆಗಾಗಿ ಹೈಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಮಾಡಿದೆ.
2022ರ ಡಿಸೆಂಬರ್ 18ರಂದು ಶ್ರೀಧರ್ ಮುಗೇರ ಅವರ ಶವ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸಿದ ಧರ್ಮಸ್ಥಳ ಠಾಣೆ ಪೊಲೀಸರು 2023ರ ಜನವರಿಯಲ್ಲಿ ತಿಮ್ಮಪ್ಪ ಪೂಜಾರಿ, ಆನಂದ ಗೌಡ, ಲಕ್ಷ್ಮಣ ಪೂಜಾರಿ ಮತ್ತು ಮಹೇಶ್ ಪೂಜಾರಿ ಆರೋಪಿಗಳೆಂದು ಬಂಧಿಸಿದ್ದರು. ಆನಂತರ, ಪ್ರಕರಣದ ತನಿಖೆಯನ್ನು ಸಾಮಾಜಿಕ ಕಾರ್ಯಕರ್ತರ ಒತ್ತಡದ ಮೇರೆಗೆ ಸಿಐಡಿಗೆ ವರ್ಗಾಯಿಸಲಾಗಿತ್ತು.

ಶ್ರೀಧರ ಮುಗೇರ ಶವ ಹಲ್ಲೆಗೀಡಾಗಿ ಬೆತ್ತಲೆಯಾಗಿ ಬಿದ್ದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರೋಪಿಗಳು ಇವರನ್ನು ಕೊಲೆಗೈದು ಶವವನ್ನು 300 ಮೀಟರ್ ದೂರದಲ್ಲಿ ಬಿಸಾಕಿದ್ದಾಗಿ ಆರೋಪಗಳಿದ್ದವು. ಆದರೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸಾಕ್ಷ್ಯಾಧಾರಗಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದು ಕುಟುಂಬಸ್ಥರನ್ನು ಕೆರಳಿಸಿತ್ತು. ಹೀಗಾಗಿ ಮರು ತನಿಖೆಗಾಗಿ ವಿಶೇಷ ತನಿಖಾ ತಂಡ ನೇಮಿಸಬೇಕೆಂದು ಹೈಕೋರ್ಟಿಗೆ ಕುಟುಂಬ ಮನವಿ ಮಾಡಿತ್ತು. ಇದಲ್ಲದೆ, ಕೊಲೆಯಾದ ಬಗ್ಗೆ ಬಲವಾದ ಅನುಮಾನಗಳನ್ನು ವ್ಯಕ್ತಪಡಿಸಿತ್ತು. ಇದರಂತೆ, ಹೈಕೋರ್ಟ್ ಎಸ್ಐಟಿ ರಚಿಸುವಂತೆ 2025ರ ಸೆಪ್ಟಂಬರ್ ನಲ್ಲಿ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.
ಹೈಕೋರ್ಟ್ ಸೂಚನೆಯಂತೆ ಇದೀ ರಾಜ್ಯ ಡಿಜಿಪಿ ಡಾ.ಎಂ.ಎ. ಸಲೀಂ ಅವರು ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಇದರಲ್ಲಿ ಹಾಲಿ ಉಡುಪಿ ಎಸ್ಪಿ ಆಗಿರುವ ಹರಿರಾಮ್ ಶಂಕರ್ ಮತ್ತು ಬೆಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿಯಾಗಿರುವ ಎಂ.ಆರ್ ಹರೀಶ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm