ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am