ಬ್ರೇಕಿಂಗ್ ನ್ಯೂಸ್
25-02-26 09:42 am Richard, Headline Karnataka ಕರಾವಳಿ
ಮಂಗಳೂರು, ಫೆ.24: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಮತ್ತು ದುಬಾರಿ ಜೀವನ ಶೈಲಿಯಿಂದ ಬೇಸತ್ತಿರುವ ಐಟಿ ಉದ್ಯೋಗಿಗಳು ಮತ್ತು ಬಹುರಾಷ್ಟ್ರೀಯ ಐಟಿ ಕಂಪನಿಗಳು ಕರ್ನಾಟಕದ ಕರಾವಳಿಯತ್ತ ಮುಖ ಮಾಡುತ್ತಿವೆ. ಕರ್ನಾಟಕ ಸರ್ಕಾರದ 'ಬಿಯಾಂಡ್ ಬೆಂಗಳೂರು' ಯೋಜನೆಯಡಿ ಮಂಗಳೂರು ವೇಗವಾಗಿ ಬೆಳೆಯುತ್ತಿದ್ದು ತಂತ್ರಜ್ಞಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಕಳೆದ 2-3 ವರ್ಷಗಳಲ್ಲಿ ಐಟಿ ವೃತ್ತಿಪರರು ಹಲವಾರು ಕಾರಣಕ್ಕೆ ಮಂಗಳೂರನ್ನು ಆಯ್ಕೆ ಮಾಡುತ್ತಿದ್ದಾರೆ.
ಐಟಿ ಪಾರ್ಕ್ಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಸಬ್ಸಿಡಿ, ರಿಯಾಯ್ತಿಗಳನ್ನು ನೀಡುತ್ತಿದ್ದು ಐಟಿ ಕಂಪನಿಗಳನ್ನು ಆಕರ್ಷಿಸಲು ಕಾರಣವಾಗಿದೆ. ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳೂರನ್ನು ಮುಂದಿನ ಪ್ರಮುಖ ಟೆಕ್ ತಾಣವೆಂದು ಗುರುತಿಸಿ ಪ್ರೋತ್ಸಾಹಿಸುತ್ತಿದ್ದಾರೆ. ಪ್ರವಾಸೋದ್ಯಮ ದೃಷ್ಟಿಯಿಂದ ಮಂಗಳೂರನ್ನು ಗೋವಾ ರೀತಿ ಬೆಳೆಸಬೇಕೆಂದು ಪ್ರೋತ್ಸಾಹ ನೀಡುತ್ತಿರುವುದು ಐಟಿ ಕಂಪನಿಗಳನ್ನು ಆಕರ್ಷಿಸಿದೆ.
ವರ್ಕ್ ಫ್ರಮ್ ಹೋಮ್ ಪ್ರಭಾವ:
ಕೋವಿಡ್ ಸಮಯದಲ್ಲಿ ಮಂಗಳೂರು- ಉಡುಪಿ ಭಾಗದ ಸುಮಾರು 1ರಿಂದ 1.5 ಲಕ್ಷ ವೃತ್ತಿಪರರು ತಮ್ಮ ಊರುಗಳಿಗೆ ಮರಳಿದ್ದರು. ಶಾಂತಿಯುತ ವಾತಾವರಣ ಮತ್ತು ಗುಣಮಟ್ಟದ ಜೀವನದ ಕಾರಣಕ್ಕೆ ಅನೇಕರು ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಕಂಪನಿಗಳು ಮರಳಿ ಕರೆದರೂ ಬೆಂಗಳೂರಿಗೆ ತೆರಳದೆ ಮಂಗಳೂರಿನ ಕಂಪನಿಯನ್ನೇ ಸೇರಿಕೊಳ್ಳುತ್ತಿದ್ದಾರೆ.
ಐಟಿ ಕಂಪನಿಗಳಿಗೆ ಬೆಂಗಳೂರು ಹೋಲಿಸಿದರೆ ನಿರ್ವಹಣಾ ವೆಚ್ಚವೂ ಕಡಿಮೆ ಇರುವುದರಿಂದ, ಕಳೆದ ಎರಡು ವರ್ಷಗಳಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಮಂಗಳೂರಿನಲ್ಲಿ ಕಾರ್ಯಾಚರಣೆ ಆರಂಭಿಸಿವೆ. ಇದರಿಂದಾಗಿ 2023ರಲ್ಲಿ 15,000 ದಷ್ಟಿದ್ದ ಐಟಿ ಉದ್ಯೋಗಿಗಳ ಸಂಖ್ಯೆ ಇಂದು 30 ಸಾವಿರಕ್ಕೆ ಏರಿಕೆಯಾಗಿದೆ. ಬೆಂಗಳೂರಿನಿಂದ ಹೊರಗೆ ಆರಂಭವಾಗುವ ಕಂಪನಿಗಳಿಗೆ ಬಾಡಿಗೆ ಸಬ್ಸಿಡಿ ಸೇರಿದಂತೆ ಅನೇಕ ರಿಯಾಯಿತಿಗಳು ಸರ್ಕಾರದ ಕಡೆಯಿಂದ ಸಿಗುತ್ತಿವೆ. ಇದರ ಫಲವಾಗಿ 2035ರ ವೇಳೆಗೆ ಮಂಗಳೂರು ಸಂಪೂರ್ಣ ಬದಲಾಗಲಿದ್ದು, ರಾಜ್ಯದ ಎರಡನೇ ಅತಿ ದೊಡ್ಡ ಮತ್ತು ಐಟಿ ವೃತ್ತಿಪರರ ನೆಚ್ಚಿನ ತಾಣವಾಗಿ ಬದಲಾಗಲಿದೆ.
ಇದಲ್ಲದೆ, ಮಂಗಳೂರು ಮತ್ತು ಕೇರಳದ ನಡುವಿನ ಸಾಂಸ್ಕೃತಿಕ ಸಾಮ್ಯತೆ ಮತ್ತು ರಸ್ತೆ- ರೈಲಿನ ಹತ್ತಿರದ ಸಂಪರ್ಕಗಳು ಹೆಚ್ಚಿನ ಉದ್ಯೋಗಿಗಳನ್ನು ಆಕರ್ಷಿಸಲು ಪೂರಕವಾಗಿದೆ. ಹೀಗಾಗಿ ನೆರೆಯ ಕೇರಳದ ವೃತ್ತಿಪರರಿಗೂ ಬೆಂಗಳೂರು ಬದಲು ಮಂಗಳೂರು ನೆಚ್ಚಿನ ತಾಣವಾಗಲಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am