ಬ್ರೇಕಿಂಗ್ ನ್ಯೂಸ್
27-02-26 08:36 pm HK News Desk ಕರಾವಳಿ
ಉಡುಪಿ, ಫೆ.27: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳಗ್ಗೆಯಿಂದಲೇ ಉಡುಪಿಗೆ ಭೇಟಿ ನೀಡಿ, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹಠಾತ್ ಪರಿಶೀಲನೆ ನಡೆಸಿದರು.
ಮೊದಲು ನಿಟ್ಟೂರಿನಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಯನ್ನು ಕಂಡು ನಗರಸಭೆಯ ಪೌರಾಯುಕ್ತ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಘಟಕದ ನಿರ್ವಹಣೆಗೆ ಪ್ರತಿ ತಿಂಗಳು 3 ಲಕ್ಷ ರೂಪಾಯಿ ಪಡೆಯುತ್ತೀರಿ, ತ್ಯಾಜ್ಯ ನೀರನ್ನು ಸಂಸ್ಕರಿಸದೇ ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದೀರಿ ಯಾಕೆ. ಆ ದುಡ್ಡಿನಲ್ಲಿ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಕ್ಕಾಗಲ್ವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಪರಿಸರ ಇಲಾಖೆಯ ಅಧಿಕಾರಿಗಳನ್ನೂ ತರಾಟೆಗೆತ್ತಿಕೊಂಡರು.
ಅಲ್ಲಿಂದ ನೇರವಾಗಿ ಮಲ್ಪೆ ಬಂದರಿಗೆ ಭೇಟಿ ನೀಡಿದ ಅವರು, ಅಲ್ಲಿನ ಮಾಲಿನ್ಯ ಹಾಗೂ ಸುತ್ತಮುತ್ತ ಹರಿಯುತ್ತಿರುವ ತ್ಯಾಜ್ಯ ನೀರು ಮತ್ತು ಹರಡಿರುವ ದುರ್ವಾಸನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಬನ್ನಂಜೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಕ್ಯಾಂಟೀನ್, ಅಡುಗೆ ಕೋಣೆಗೆ ತೆರಳಿ ಸ್ವಚ್ಛತೆಯನ್ನು ಪರಿಶೀಲಿಸಿದರು. ಈ ವೇಳೆ ಅಲ್ಲಿನ ಸ್ವಚ್ಛತಾ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ, ತಮಗೆ ಇಎಸ್ಐ ಸೇರಿದಂತೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ದೂರಿದರು.
ಈ ವೇಳೆ, ಗುತ್ತಿಗೆದಾರರು ಯಾರೆಂದು ಕೇಳಿ ಸೌಲಭ್ಯ ನೀಡದ ಬಗ್ಗೆ ಪ್ರಶ್ನೆ ಮಾಡಿದ ನ್ಯಾಯಮೂರ್ತಿ, ಕಾರ್ಮಿಕರಿಗೆ ಕೂಡಲೇ ಇಎಸ್ಐ ಕಾರ್ಡ್ ನೀಡುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕೆ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು. ಇಂತಹ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ನ್ಯಾಯಮೂರ್ತಿ ವೀರಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
Justice B. Veerappa, the Upa Lokayukta, paid a surprise visit to Udupi on Friday morning and carried out sudden inspections at several government offices and facilities.He first visited the sewage treatment plant at Nitte, where he expressed strong displeasure over the poor maintenance. Justice Veerappa severely reprimanded the Municipal Commissioner and other concerned officials, questioning why untreated sewage was being discharged directly into the sea despite collecting ₹3 lakh every month for the plant’s maintenance.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am