ಬ್ರೇಕಿಂಗ್ ನ್ಯೂಸ್
27-02-26 08:59 pm Mangalore Correspondent ಕರಾವಳಿ
ಮಂಗಳೂರು, ಫೆ.27: ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವತಿಯಿಂದ ಈ ವಿಮಾನ ಹಾರಾಟ ನಡೆಯಲಿದ್ದು, ಕರಾವಳಿ ಭಾಗದಿಂದ ಹೆಚ್ಚಿನ ಸಂಖ್ಯೆಯ ಜನರು ಉದ್ಯೋಗ ಮತ್ತು ವ್ಯಾಪಾರ ನಿಮಿತ್ತ ಮಸ್ಕತ್‌ಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಗೆ ಹೆಚ್ಚಿನ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ವ್ಯವಹಾರ ನಡೆಸಿ, ವಿಮಾನಯಾನ ಪುನಾರಂಭಿಸುವಂತೆ ಮನವಿ ಸಲ್ಲಿಸಿದ್ದರು.
ಸದ್ಯದ ವೇಳಾಪಟ್ಟಿಯ ಪ್ರಕಾರ, ವಾರದಲ್ಲಿ ಎರಡು ದಿನ ಅಂದರೆ ಪ್ರತಿ ಭಾನುವಾರ ಮತ್ತು ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಹಾರಾಟ ನಡೆಸಲಿದೆ. ಈ ನೇರ ಸೇವೆಯಿಂದಾಗಿ ಪ್ರಯಾಣದ ಸಮಯ ಉಳಿತಾಯವಾಗುವುದಲ್ಲದೆ, ಅನಿವಾಸಿ ಭಾರತೀಯರಿಗೆ ತಮ್ಮ ಊರುಗಳಿಗೆ ನೇರವಾಗಿ ಪ್ರಯಾಣಿಸಲು ಬಹಳಷ್ಟು ಅನುಕೂಲವಾಗಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ "ಮಂಗಳೂರು- ಮಸ್ಕತ್ ನೇರ ವಿಮಾನಯಾನ ಸೇವೆಯು ಅಚಾನಕ್ ಆಗಿ ಸ್ಥಗಿತಗೊಂಡ ಕಾರಣ ಮಸ್ಕತ್‌ನಲ್ಲಿ ನೆಲೆಸಿರುವ ನಮ್ಮ ಕರಾವಳಿ ಭಾಗದ ಸಾವಿರಾರು ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಎದುರಾಗಿತ್ತು. ಮಸ್ಕತ್‌ನಿಂದ ಮಂಗಳೂರಿಗೆ ಬರಬೇಕಾದವರು ದೆಹಲಿ, ಮುಂಬೈ ಅಥವಾ ಕಣ್ಣೂರು ಮೂಲಕ ಸುತ್ತಿ ಬಳಸಿ ಪ್ರಯಾಣಿಸಬೇಕಾಗಿತ್ತು. ಈ ಸಮಸ್ಯೆ ಬಗ್ಗೆ ನಿರಂತರ ಪ್ರಯತ್ನ ಹಾಗೂ ಮನವಿಗೆ ಸ್ಪಂದಿಸಿ, ಮಾರ್ಚ್ 1ರಿಂದ ಈ ಸೇವೆಯನ್ನು ಪುನರಾರಂಭಿಸಲು ಕ್ರಮ ಕೈಗೊಂಡ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮಮೋಹನ್ ನಾಯ್ಡು ಅವರಿಗೆ ಸಮಸ್ತ ಅನಿವಾಸಿ ಕರಾವಳಿಗರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am