ಬ್ರೇಕಿಂಗ್ ನ್ಯೂಸ್
06-03-26 04:08 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 06: ಸೈಬರ್ ಅಪರಾಧಿಗಳು ಇದೀಗ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಅವರ ಜೀವಮಾನದ ಉಳಿತಾಯಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೇ ರೀತಿಯ ಮತ್ತೊಂದು ಗಂಭೀರ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೊಬೈಲ್ ಹ್ಯಾಕ್ ಮಾಡಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರ ಖಾತೆಯಿಂದ ಬರೋಬ್ಬರಿ ₹28.46 ಲಕ್ಷ ಹಣವನ್ನು ದೋಚಿರುವುದು ಬೆಳಕಿಗೆ ಬಂದಿದೆ.
ಮೊಬೈಲ್ ಹ್ಯಾಕ್ ಮಾಡಿ ಹಣ ಲೂಟಿ ;
ಮಂಗಳೂರಿನ ನಿವಾಸಿಯಾಗಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮಹಿಳೆಯೇ ವಂಚನೆಗೆ ಒಳಗಾದವರು. ಬ್ಯಾಂಕ್ ಸೇವೆಯಿಂದ ನಿವೃತ್ತಿಯಾದ ಬಳಿಕ ಅವರಿಗೆ ಬಂದ ನಿವೃತ್ತಿ ವೇತನದ ಹಣವನ್ನು ಯುನಿಯನ್ ಬ್ಯಾಂಕ್ ಆಫ್ ಇಂಡಿಯಾಯಲ್ಲಿರುವ ತಮ್ಮ ನಾಲ್ಕು ವಿಭಿನ್ನ ಖಾತೆಗಳಲ್ಲಿ ಜಮಾ ಮಾಡಿಟ್ಟಿದ್ದರು.
ಮಾರ್ಚ್ 3ರಂದು ರಾತ್ರಿ ಸುಮಾರು 9.30ರ ವೇಳೆಗೆ ಅವರ ಮೊಬೈಲ್ ಫೋನ್ ಅಚಾನಕ್ ಹ್ಯಾಕ್ ಆಗಿದೆ. ಮೊಬೈಲ್ ಹ್ಯಾಕ್ ಆದ ಬಳಿಕ ಫೋನ್‌ಗೆ ಬರುವ ಎಲ್ಲಾ ಇನ್‌ಕಮಿಂಗ್ ಕರೆಗಳು ಸ್ಥಗಿತಗೊಂಡಿವೆ. ಇದರಿಂದ ಅನುಮಾನಗೊಂಡ ಮಹಿಳೆ ಫೋನ್ ಪರಿಶೀಲಿಸುತ್ತಿದ್ದ ವೇಳೆ, ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತಿರುವ ಕುರಿತು ಸರಣಿ ಎಸ್‌ಎಂಎಸ್ ಸಂದೇಶಗಳು ಬರತೊಡಗಿವೆ.
ನಾಲ್ಕು ಖಾತೆಗಳಿಂದ 28.46 ಲಕ್ಷ ವರ್ಗಾವಣೆ;
ಅಪರಿಚಿತ ಸೈಬರ್ ಕಳ್ಳರು ಮಹಿಳೆಯ ನಾಲ್ಕು ಬ್ಯಾಂಕ್ ಖಾತೆಗಳಿಂದ ಒಟ್ಟು 28,46,688 ಲಕ್ಷ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡಿರುವುದು ತಿಳಿದುಬಂದಿದೆ.
ಹಣ ಕಟ್ ಆಗುತ್ತಿರುವುದು ಗೊತ್ತಾಗುತ್ತಿದ್ದಂತೆಯೇ ಮಹಿಳೆ ತಕ್ಷಣವೇ ಬ್ಯಾಂಕ್ ಹೆಲ್ಪ್‌ಲೈನ್ ಸಂಖ್ಯೆಗೆ ಕರೆ ಮಾಡಿ ತಮ್ಮ ಬ್ಯಾಂಕ್ ಖಾತೆಗಳು ಹಾಗೂ ಎಟಿಎಂ ಕಾರ್ಡ್‌ಗಳನ್ನು ಫ್ರೀಜ್ ಮಾಡಿಸಿದ್ದಾರೆ. ನಂತರ ರಾಷ್ಟ್ರೀಯ ಸೈಬರ್ ಅಪರಾಧ ಸಹಾಯವಾಣಿ 1930 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ. ಈ ತಕ್ಷಣದ ಕ್ರಮದಿಂದ ಇನ್ನಷ್ಟು ಹಣ ನಷ್ಟವಾಗುವುದನ್ನು ತಪ್ಪಿಸಲಾಗಿದೆ.
“ಯಾರೋ ಅಪರಿಚಿತ ವ್ಯಕ್ತಿಗಳು ನನ್ನ ಮೊಬೈಲ್ ಹ್ಯಾಕ್ ಮಾಡಿ, ನನ್ನ ಗಮನಕ್ಕೆ ಬಾರದೇ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದಾರೆ. ಪ್ರಕರಣವನ್ನು ಸೂಕ್ತವಾಗಿ ತನಿಖೆ ನಡೆಸಿ ಹಣವನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು” ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣ ವರ್ಗಾವಣೆಯಾದ ಖಾತೆಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am