ಬ್ರೇಕಿಂಗ್ ನ್ಯೂಸ್
06-03-26 07:01 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026–27ನೇ ಸಾಲಿನ ಬಜೆಟ್‌ನಲ್ಲಿ ಮೀನುಗಾರಿಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದೆ. ಮೀನುಗಾರರ ಆರ್ಥಿಕ ಸ್ಥಿತಿ ಬಲಪಡಿಸುವುದು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.
ಮೀನುಗಾರರಿಗೆ ಸಲಕರಣೆ ಕಿಟ್ ಮೌಲ್ಯ ದ್ವಿಗುಣ:
ಮೀನುಗಾರರಿಗೆ ನೀಡುತ್ತಿದ್ದ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದರಿಂದ ಮೀನುಗಾರರು ಉತ್ತಮ ಗುಣಮಟ್ಟದ ಉಪಕರಣಗಳನ್ನು ಪಡೆದು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಲು ನೆರವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಸಮುದ್ರ ಕೃಷಿಗೆ ಸಂಶೋಧನಾ ಕೇಂದ್ರ:
ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಜೈವಿಕ ತಂತ್ರಜ್ಞಾನ, ಸಮುದ್ರ ಕೃಷಿ ಮತ್ತು ನವೀನ ತಂತ್ರಜ್ಞಾನಗಳ ಸಂಶೋಧನೆಗೆ ಈ ಕೇಂದ್ರ ವೇದಿಕೆಯಾಗಲಿದೆ.
ಮತ್ಸ್ಯದರ್ಶಿನಿ ಮಾರುಕಟ್ಟೆಗಳ ಸ್ಥಾಪನೆ:
ಮೀನು ಆಹಾರ ಬಳಕೆಯನ್ನು ಉತ್ತೇಜಿಸಲು ಹಾಗೂ ಗುಣಮಟ್ಟದ ಮೀನು ಉತ್ಪನ್ನಗಳನ್ನು ಲಭ್ಯವಾಗಿಸಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
ಸುಸಜ್ಜಿತ ಮೀನು ಮಾರುಕಟ್ಟೆ ಅಭಿವೃದ್ಧಿ:
ಮೀನು ಮಾರಾಟ ವ್ಯವಸ್ಥೆಯನ್ನು ಬಲಪಡಿಸಲು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಆಧುನಿಕ ಮೀನು ಮಾರುಕಟ್ಟೆಗಳನ್ನು ನಿರ್ಮಿಸಲಾಗುವುದು. ಇದರಿಂದ ಮೀನುಗಾರರಿಗೆ ಉತ್ತಮ ಮಾರಾಟ ಅವಕಾಶ ಸಿಗಲಿದೆ. ಅಲ್ಲದೆ, ಮೀನುಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲು ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗೆ 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಒಳನಾಡು ಮೀನುಗಾರಿಕೆಗೆ ವಿಶೇಷ ಒತ್ತು:
ಗ್ರಾಮೀಣ ಪ್ರದೇಶಗಳ ಉದ್ಯೋಗ ಸೃಷ್ಟಿ ಮತ್ತು ಆಹಾರ ಭದ್ರತೆಗಾಗಿ ಒಳನಾಡು ಮೀನುಗಾರಿಕೆಯನ್ನು ಉತ್ತೇಜಿಸಲಾಗುವುದು. ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ಆಧುನಿಕ ತಂತ್ರಜ್ಞಾನ ತರಬೇತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಭರವಸೆ ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am