ಬ್ರೇಕಿಂಗ್ ನ್ಯೂಸ್
07-03-26 07:20 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 06: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ 10ನೇ ಮೈಲಿಕಲ್ಲು ಬಳಿ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಅಂಚೆ ಇಲಾಖೆ ವಿರುದ್ಧ ಕಂದಾಯ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಪುದು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್‌ಗಳು ಪತ್ತೆಯಾಗಿದ್ದವು. 2013ರಿಂದ 2023ರ ವರೆಗೆ ನೀಡಲಾಗಿದ್ದ ಆಧಾರ್ ಕಾರ್ಡ್‌ಗಳು ಈ ಸ್ಥಳದಲ್ಲಿ ರಾಶಿಯಾಗಿ ಬಿದ್ದಿರುವುದು ಸಾರ್ವಜನಿಕರ ಗಮನ ಸೆಳೆದಿತ್ತು. ಪತ್ತೆಯಾದ ಆಧಾರ್ ಕಾರ್ಡ್‌ಗಳಲ್ಲಿ ಫರಂಗಿಪೇಟೆ ಅಂಚೆ ಕಚೇರಿಯ ಸೀಲ್ ಇರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ.
ಮಾರ್ಚ್ 5ರಂದು ಅಂಚೆ ಇಲಾಖೆಯ ಸಹಾಯಕ ಅಂಚೆ ಅಧೀಕ್ಷಕರು ಹಾಗೂ ನಿರೀಕ್ಷಕರು ಪುದು ಗ್ರಾಮ ಪಂಚಾಯತ್ ಕಚೇರಿ ಮತ್ತು ಕಾರ್ಡ್‌ಗಳು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ್ದರು. ಆದರೆ ಆ ಸಂದರ್ಭದಲ್ಲಿ ಅವರಿಗೆ ಕಾರ್ಡ್‌ಗಳು ಸಿಕ್ಕಿರಲಿಲ್ಲ. ನಂತರ ಪುದು ಗ್ರಾಮ ಪಂಚಾಯತ್ ಅಧಿಕಾರಿಗಳು ಸಾರ್ವಜನಿಕರಿಂದ ಪಡೆದಿದ್ದ ಕೆಲವು ಆಧಾರ್ ಕಾರ್ಡ್‌ಗಳನ್ನು ಅಂಚೆ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಪತ್ತೆಯಾದ ಆಧಾರ್ ಕಾರ್ಡ್‌ಗಳಲ್ಲಿ ಪುದು ಅಂಚೆ ಕಚೇರಿಯ ಸೀಲ್ ಇರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ವಿತರಣೆ ಮಾಡದೇ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಅಂಚೆ ಇಲಾಖೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm