ಬ್ರೇಕಿಂಗ್ ನ್ಯೂಸ್
07-03-26 10:17 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 07: ಗಲ್ಫ್ ಯುದ್ಧದ ಕಾರಣ ಕಚ್ಚಾ ತೈಲದ ಕೊರತೆಯಿಂದ ಎಂಆರ್ ಪಿಎಲ್ ಘಟಕದ ಕೆಲವು ರಿಫೈನರಿ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಸಂಪೂರ್ಣ ತಳ್ಳಿಹಾಕಿದ್ದು ರಿಫೈನರಿಯ ಎಲ್ಲ ಕಾರ್ಯಾಚರಣೆಗಳು ಸಹಜ ರೀತಿಯಲ್ಲೇ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪ್ರಕಟವಾದ ಒಂದು ಪೋಸ್ಟ್ನಲ್ಲಿ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ ಬ್ಯಾರೆಲ್ ಸಾಮರ್ಥ್ಯದ ರಿಫೈನರಿಯ ಕೆಲವು ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಈ ಮಾಹಿತಿ ಸಂಪೂರ್ಣ ತಪ್ಪಾಗಿದೆ ಎಂದು ಎಂಆರ್ಪಿಎಲ್ ತಿಳಿಸಿದೆ.
ಕಂಪನಿಯ ಪ್ರಕಟಣೆಯ ಪ್ರಕಾರ, ಈ ರೀತಿಯ ವದಂತಿಗಳು ವಾಸ್ತವಕ್ಕೆ ದೂರವಾಗಿದ್ದು ರಿಫೈನರಿ ಸಾಮಾನ್ಯವಾಗಿ ಕಾರ್ಯ ನಿರ್ವಹಿಸುತ್ತಿದೆ. ರಿಫೈನರಿ ಕಾರ್ಯಾಚರಣೆ ಮುಂದುವರಿಸಲು ಬೇಕಾದಷ್ಟು ಕಚ್ಚಾ ತೈಲವನ್ನು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
ರಿಫೈನರಿಯಲ್ಲಿ ಯಾವುದೇ ಘಟಕವನ್ನು ಸ್ಥಗಿತಗೊಳಿಸಿಲ್ಲ ಹಾಗೂ ಸಹಜ ಸಾಮರ್ಥ್ಯದಲ್ಲೇ ಕಾರ್ಯ ನಿರ್ವಹಣೆ ಮುಂದುವರಿದಿದೆ ಎಂದು ಎಂಆರ್ಪಿಎಲ್ ಹೇಳಿದೆ. ತಪ್ಪು ಮಾಹಿತಿಗಳು ಹರಡದಂತೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕಂಪನಿ ಮನವಿ ಮಾಡಿದೆ.
ಇದರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕೂಡ ತಳ್ಳಿ ಹಾಕಿದೆ. ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದ್ದು, ಪೂರೈಕೆ ಮತ್ತು ವಿತರಣೆ ವ್ಯವಸ್ಥೆ ಸಾಮಾನ್ಯವಾಗಿ ನಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.
ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಭಾರತದಲ್ಲಿ ಇಂಧನ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am