ಬ್ರೇಕಿಂಗ್ ನ್ಯೂಸ್
13-03-26 09:38 pm HK News Staffer ಕರಾವಳಿ
ಉಳ್ಳಾಲ, ಮಾ.13: ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಾನೂನಿನಡಿ ಕಠಿಣ ದಂಡ ಪ್ರಯೋಗಿಸುವ ಅಧಿಕಾರವಿದ್ದರೂ ಸಹ ಅದನ್ನ ಸಮರ್ಪಕವಾಗಿ ಅನುಷ್ಟಾನಗೊಳಿಸುತ್ತಿಲ್ಲವೆಂದು ಜಿಲ್ಲಾ ಸ್ವಚ್ಚತಾ ರಾಯಭಾರಿ ಶೀನ ಶೆಟ್ಟಿ ಅವರು ಮಾಧ್ಯಮ ಸಂವಾದವೊಂದರಲ್ಲಿ ಕಳವಳ ವ್ಯಕ್ತಪಡಿಸಿರುವ ಬಗ್ಗೆ ದಿನ ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಪಸ್ತಾಪಿಸಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಘಟಕ, ಮಾದರಿ ಗ್ರಾಮ ಅಭಿಯಾನ ಹಾಗೂ ಜನಶಿಕ್ಷಣ ಟ್ರಸ್ಟ್ ಜಂಟಿ ಆಶ್ರಯದಲ್ಲಿ ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ಬಲ್ಲಿ ಬುಧವಾರ ನಡೆದಿದ್ದ "ಸಮುದಾಯ ಆರೋಗ್ಯ ಅರಿವು ಅಭಿಯಾನ" ಎಂಬ ಸಂವಾದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸ್ವಚ್ಚತಾ ರಾಯಭಾರಿ ಶೀನ ಶೆಟ್ಟಿ ಅವರು ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಾನೂನಿನಡಿ ಒಂದು ಲಕ್ಷ ರೂ. ವರೆಗೆ ಕಠಿನ ದಂಡಾಸ್ತ್ರಗಳನ್ನು ಪ್ರಯೋಗಿಸುವ ಅಧಿಕಾರವಿದ್ದರೂ ಸಹ ಅದನ್ನ ಸಮರ್ಪಕ ಅನುಷ್ಟಾನಗೊಳಿಸದ ವ್ಯವಸ್ಥೆಯ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದರು.

ಸಂವಾದ ಕಾರ್ಯಕ್ರಮದ ಕುರಿತಂತೆ ದಿನ ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಕಿಶೋರ್ ಕುಮಾರ್ ಅವರು ವಿಧಾನ ಪರಿಷತ್ ನಲ್ಲಿ ಶುಕ್ರವಾರ ನಡೆದ ಅಧಿವೇಶನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದರು. ಗ್ರಾಮೀಣ ಭಾಗದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ದಂಡ ಪ್ರಯೋಗಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಪೊಲೀಸರಿಗೆ ಅಧಿಕಾರ ನೀಡಬೇಕು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಸ ಎಸೆಯುವುದನ್ನ ನಿಯಂತ್ರಿಸಲು ಸಂಬಂಧಪಟ್ಟ ಆಯಾ ಇಲಾಖೆಗಳೇ ಕ್ರಮ ಕೈಗೊಳ್ಳಬೇಕು. ವಿವಿಧ ಹೆದ್ದಾರಿಗಳು ಹಾದು ಹೋಗುವ ಅರಣ್ಯ ಪ್ರದೇಶಗಳಲ್ಲಿ ಬೇಕಾಬಿಟ್ಟಿ ಕಸ ಎಸೆಯುವವರ ವಿರುದ್ಧವೂ ದಂಡ ಪ್ರಯೋಗಿಸಿ ಸ್ವಯಂಪ್ರೇರಿತ ದೂರು ದಾಖಲಿಸುವ ಅಧಿಕಾರವನ್ನ ಅರಣ್ಯ ಇಲಾಖೆಗೂ ನೀಡಬೇಕು.
ಈ ಎಲ್ಲಾ ವಿಷಯವನ್ನು ಸರಕಾರ ಗಂಭೀರ ಪರಿಗಣಿಸಿ, ಸ್ವಚ್ಚತೆಯ ಬಗ್ಗೆ ಪ್ರಸ್ತುತ ಇರುವ ನಿಯಮಗಳನ್ನ ಮತ್ತಷ್ಟು ಬಲಪಡಿಸಿ ರಾಜ್ಯದಾದ್ಯಂತ ಆ ನಿಯಮಗಳು ಪರಿಣಾಮಕಾರಿ ಅನುಷ್ಟಾನಗೊಂಡು ಸ್ವಚ್ಚ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಿಶೋರ್ ಕುಮಾರ್ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.
ಸುಮಾರು ಒಂದೂವರೆ ದಶಕಗಳ ನಂತರ ಸ್ವಚ್ಚತಾ ಅಭಿಯಾನದ ವಿಚಾರವು ಅಧಿವೇಶನದಲ್ಲಿ ಪ್ರತಿಧ್ವನಿಸಿರುವುದು ಐತಿಹಾಸಿಕ ಘಟನೆಯಾಗಿದ್ದು "ಕಸ ಮುಕ್ತ ಗ್ರಾಮ-ಕಸ ಮುಕ್ತ ಕರ್ನಾಟಕ" ನಿರ್ಮಾಣಕ್ಕೆ ಆಶಾ ಭಾವನೆ ಮೂಡಿಸಿದೆ. ಒಂದೂವರೆ ದಶಕದ ಹಿಂದೆ ಸ್ವಚ್ಚತೆಯ ಬಗ್ಗೆ ರಾಜ್ಯದಾದ್ಯಂತ ನಡೆದಿದ್ದ ಜಾಗೃತಿ ಅಭಿಯಾನಗಳ ಕೂಗು ಅಧಿವೇಶನದಲ್ಲೂ ಪ್ರತಿಧ್ವನಿಸಿತ್ತು. ಇದೀಗ ಮತ್ತೆ ಪರಿಷತ್ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿಯೆತ್ತಿದ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕಸಮುಕ್ತ ಕರ್ನಾಟಕ ನಿರ್ಮಾಣ ಅಭಿಯಾನಕ್ಕೆ ಮಾಧ್ಯಮಗಳ ಸಹಕಾರ ಪ್ರಮುಖವಾಗಿದೆಯೆಂದು ಜಿಲ್ಲಾ ಸ್ವಚ್ಚತಾ ರಾಯಭಾರಿ ಶೀನ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am