ಬ್ರೇಕಿಂಗ್ ನ್ಯೂಸ್
14-03-26 08:31 pm HK News Staffer ಕರಾವಳಿ
ಮಂಗಳೂರು, ಮಾ.14: ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಮತ್ತು ಕಂದಾಯ ಭೂಮಿ ಗುರುತಿಸಿ ವರದಿ ಸಲ್ಲಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಶನಿವಾರ ಮುಲ್ಕಿ ತಾಲೂಕು ಆಡಳಿತ ಕೇಂದ್ರ ಪ್ರಜಾಸೌಧ ಉದ್ಘಾಟಿಸಿ ಮಾತನಾಡಿದರು. ಕಂದಾಯ ಮತ್ತು ಅರಣ್ಯ ಭೂಮಿ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ರೈತರು ಈ ಬಗ್ಗೆ ಅನುಭವಿಸುತ್ತಿರುವ ಸಂಕಷ್ಟಗಳನ್ನು ಸರಕಾರವು ಗಂಭೀರವಾಗಿ ಪರಿಗಣಿಸಿದೆ. ರೈತರಿಗೆ ಹಿಂದೆ ಮಂಜೂರಾಗಿರುವ ಭೂಮಿಯಲ್ಲಿ ಅರಣ್ಯ -ಕಂದಾಯ ಬೇರ್ಪಡಿಸುವಿಕೆಗೆ ಜಂಟಿ ಸರ್ವೆ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ತ್ವರಿತ ಕಾರ್ಯ ಪ್ರವೃತ್ತರಾಗಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಭೂಮಿ ಮಂಜೂರಾಗಿದ್ದರೂ ಇನ್ನೂ ಪ್ಲಾಟಿಂಗ್ ಆಗದೆ ದೀರ್ಘ ಕಾಲದಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದರು. ಆದರೆ ಈಗ ಸರಕಾರವೇ ಮುಂದೆ ಬಂದು ಪ್ಲಾಟಿಂಗ್ ಮಾಡಿಕೊಡುತ್ತಿದೆ. 2018 ರಿಂದ 23ರ ವರೆಗೆ ಜಿಲ್ಲೆಯಲ್ಲಿ 1948 ಜನರಿಗೆ ಪ್ಲಾಟಿಂಗ್ ಆಗಿದ್ದು, ಕಳೆದ 2 ವರ್ಷಗಳಲ್ಲಿ 60,943 ಜನರಿಗೆ ಪ್ಲಾಟಿಂಗ್ (1-5) ಮಾಡಲಾಗಿದೆ. ಈ ಪೈಕಿ 23,620 ರೈತರಿಗೆ ಪಹಣಿ ವಿತರಿಸಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.
ಮನೆ ಅಡಿ ಸ್ಥಳ ಸಕ್ರಮೀಕರಣ ಮಾಡುವ 94ಸಿ ಮತ್ತು 94ಸಿಸಿ ಪ್ರಕರಣಗಳಲ್ಲಿ ಇದುವರೆಗೆ 2.20 ಲಕ್ಷ ಮಂದಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಮೃತರ ಹೆಸರಿನಲ್ಲಿದ್ದ ಜಮೀನನ್ನು ವಾರಿಸುದಾರರ ಹೆಸರಿಗೆ ಖಾತೆ ಮಾಡಿಕೊಡುವ ಇ -ಪೌತಿ ಅಭಿಯಾನದಲ್ಲಿ 60 ಸಾವಿರ ವಾರಿಸುದಾರರಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಸಚಿವರು ಹೇಳಿದರು. ತಹಶೀಲ್ದಾರ್ ಕೋರ್ಟ್ ಗಳಲ್ಲಿ ಎರಡು ವರ್ಷಕ್ಕೂ ಮೀರಿದ 10,774 ಪ್ರಕರಣಗಳನ್ನು ಅಭಿಯಾನ ಮಾಡಿ 130 ಕ್ಕೆ ಇಳಿಸಲಾಗಿದೆ. ಅದೇ ರೀತಿ ಎ.ಸಿ ಕೋರ್ಟ್ ಗಳಲ್ಲಿ 2 ವರ್ಷ ಮೀರಿದ 73624 ಪ್ರಕರಣಗಳು ಇದ್ದವು. ಅದನ್ನು 2299 ಕ್ಕೆ ಇಳಿಸಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದರು.






ಭೂ ದಾಖಲೆ 24 ಗಂಟೆಯೂ ಲಭ್ಯ:
ಭೂಮಿ ದಾಖಲೆಯ ದೃಢೀಕೃತ ಪ್ರತಿ ಪಡೆಯಲು ಸಾರ್ವಜನಿಕರು ಅಲೆದಾಡಬೇಕಾಗಿಲ್ಲ. ಈಗ ಆನ್ಲೈನ್ ಮೂಲಕ ದಿನದ 24 ಗಂಟೆಯಲ್ಲಿಯೂ ಜಮೀನಿಗೆ ಸಂಬಂಧಪಟ್ಟ ದಾಖಲೆಗಳನ್ನು ಕಂಪ್ಯೂಟರ್ ಮತ್ತು ಮೊಬೈಲ್ ಮೂಲಕ ಪಡೆಯಬಹುದಾಗಿದೆ. ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 73 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ತಾಲೂಕು ಕಚೇರಿಗಳಲ್ಲಿ ಸ್ಕ್ಯಾನಿಂಗ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಜನರಿಗೆ ಆಡಳಿತ ಹತ್ತಿರವಾಗಲು ಹಾಗೂ ಅಧಿಕಾರಿಗಳಿಗೆ ತಾವು ಇರುವುದು ಜನರ ಸೇವೆಗಾಗಿ ಎಂಬ ಮನೋಭಾವನೆ ಇರಲು ತಾಲೂಕು ಆಡಳಿತ ಕಚೇರಿಗಳಿಗೆ ‘ಪ್ರಜಾ ಸೌಧ’ ಎಂದು ಹೆಸರು ಇಡಲಾಗಿದೆ. ಮೂಲ್ಕಿ ಪ್ರಜಾಸೌಧ ಕಚೇರಿಗೆ ಕಂಪೌಂಡ್ ನಿರ್ಮಾಣ ಮತ್ತು ಇತರ ಅಗತ್ಯ ಸೌಲಭ್ಯಗಳಿಗಾಗಿ ಹೆಚ್ಚುವರಿಯಾಗಿ ರೂ. 1.60 ಕೋಟಿ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಬಂಡವಾಳ ಹೂಡಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು. ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಜಿಲ್ಲೆಗೆ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ ) ಘೋಷಿಸಲಾಗಿದ್ದು , ಶೀಘ್ರವೇ ಈ ಬಗ್ಗೆ ಕಾರ್ಯ ಪ್ರವೃತ್ತರಾಗುವುದಾಗಿ ಅವರು ಹೇಳಿದರು.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಹೊಸ ಓ.ಪಿ.ಡಿ ಬ್ಲಾಕ್ ನಿರ್ಮಿಸಲು ರೂ. 70 ಕೋಟಿ ಮಂಜೂರಾಗಿದೆ. ಮೂಡಬಿದ್ರೆ, ಬಂಟ್ವಾಳ, ವಿಟ್ಲ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಉತ್ತಮ ಕ್ಲಿನಿಕಲ್ ಸೇವೆಯನ್ನು ನೀಡಲು ಜಿಲ್ಲೆಯ 3 ಖಾಸಗಿ ಮೆಡಿಕಲ್ ಕಾಲೇಜುಗಳೊಂದಿಗೆ ಒಡಂಬಡಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದರಿಂದ ಈ ಆಸ್ಪತ್ರೆಗಳಲ್ಲಿ ಹೆಚ್ಚು ವೈದ್ಯರು ಮತ್ತು ನರ್ಸಿಂಗ್ ಸೇವೆ ದೊರಕಲಿದೆ ಎಂದು ಅವರು ಹೇಳಿದರು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಲ್ಲಿ ಅರಣ್ಯ- ಕಂದಾಯ ಭೂಮಿ ಸಮಸ್ಯೆ ಇತ್ಯರ್ಥ ಪಡಿಸಲು ಕಂದಾಯ ಸಚಿವರಲ್ಲಿ ಆಗ್ರಹಿಸಿದರು. ತಲಪಾಡಿಯಿಂದ ಕುಂದಾಪುರದ ವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ಹಾಗೂ ರಸ್ತೆಯ ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.
ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಇದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am