ಬ್ರೇಕಿಂಗ್ ನ್ಯೂಸ್
17-03-26 07:35 pm HK News Staffer ಕರಾವಳಿ
ಉಡುಪಿ, ಮಾ.17: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರ ವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ 'ಸಮಾಧಾನ ಮಹೋತ್ಸವ' ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಮತಾಂತರದ ಷಡ್ಯಂತ್ರವಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದಕ್ಕೆ ಕೂಡಲೇ ತಡೆ ನೀಡಬೇಕೆಂದು ಜಾಗರಣ ವೇದಿಕೆ ಒತ್ತಾಯಿಸುತ್ತದೆ ಎಂದರು.
ತಮಿಳುನಾಡಿನಲ್ಲಿ ಲಾಝರಸ್ ಅವರ ವಿರುದ್ಧ ಸಾಕಷ್ಟು ಕ್ರಿಮಿನಲ್ ಕೇಸುಗಳಿದ್ದು ಹಲವು ಗಂಭೀರ ಆರೋಪಗಳೂ ಇವೆ ಎಂದ ಶ್ರೀಕಾಂತ್ ಶೆಟ್ಟಿ, ಹಿಂದು ವಿರೋಧಿ ಭಾಷಣ, ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕುರಿತಂತೆ ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿವೆ ಎಂದರು.

ಉಡುಪಿಯಂಥ ಶಾಂತ ನಗರದಲ್ಲಿ ಧಾರ್ಮಿಕ ಅಶಾಂತಿ ಮೂಡಿಸುವ ವಿವಾದಾತ್ಮಕ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮನವಿ ಮಾಡಿದ ಅವರು, ಒಂದು ವೇಳೆ ಅನುಮತಿ ನೀಡಿದಲ್ಲಿ ವೇದಿಕೆಯಿಂದ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಿಂಜಾವೇಯ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ, ಜಿಲ್ಲಾ ಪ್ರಮುಖರಾದ ರತ್ನಾಕರ ಅಮೀನ್, ಗುರುಪ್ರಸಾದ್ ನಾರಾವಿ, ವಿಜಯಕೊಡವೂರು ಉಪಸ್ಥಿತರಿದ್ದರು.
A controversy has erupted in Udupi over the proposed “Samadhana Mahotsava” program scheduled from March 20 to 22 at the Mission Compound, to be led by controversial Tamil Nadu-based missionary Mohan C. Lazarus.Hindu Jagarana Vedike leader Srikanth Shetty has strongly opposed the event, stating that it will not be allowed to take place. Addressing a press conference in Udupi, he alleged that the program is a “conversion conspiracy” being carried out under the guise of promoting peace.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm