ಬ್ರೇಕಿಂಗ್ ನ್ಯೂಸ್
23-03-26 05:13 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 23: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರಕಾರ ಮತ್ತು ಸಿಬಿಐಗೆ ನೋಟೀಸ್ ಜಾರಿ ಮಾಡಿದೆ.
ಸೌಜನ್ಯಾ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟಿಗೆ ಪ್ರಕರಣದ ಮರು ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಕೋರ್ಟಿಗೆ ಹಾಜರಾಗಿದ್ದ ಶೋಭಾ ಗುಪ್ತಾ, ಸ್ಥಳೀಯ ಪೊಲೀಸರಿಂದ ಮತ್ತು ಸಿಐಡಿಯಿಂದ ಮಾಹಿತಿ ಪಡೆದು ಸಿಬಿಐ ಸ್ವತಂತ್ರ ತನಿಖೆ ಕೈಗೊಳ್ಳಲು ವಿಫಲವಾಗಿದೆ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು. ಅಲ್ಲದೆ, ಸೌಜನ್ಯಾ ಶವ ಸಿಕ್ಕಿದ್ದ ಸ್ಥಳದ ಸಾಕ್ಷ್ಯ ಆಧರಿಸಿ ಸತ್ಯಶೋಧನೆ ಮಾಡುವುಕ್ಕೂ ತನಿಖಾಧಿಕಾರಿಗಳು ವಿಫಲವಾಗಿದ್ದಾರೆ. ಮೂವರು ಆರೋಪಿಗಳ ಬಗ್ಗೆ ಸ್ಥಳೀಯವಾಗಿ ಅನುಮಾನಗಳಿದ್ದರೂ ಸಿಬಿಐ ಅವರನ್ನು ತನಿಖೆ ಕೈಗೊಂಡಿಲ್ಲ. ಹೀಗಾಗಿ ಪ್ರಕರಣದ ಮರು ತನಿಖೆಯ ಅಗತ್ಯವಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ದ್ವಿಸದಸ್ಯ ಪೀಠದಲ್ಲಿದ್ದ ಜಸ್ಟಿಸ್ ಸಂಜಯ್ ಕುಮಾರ್ ಮತ್ತು ವಿನೋದ್ ಚಂದ್ರನ್ ಅವರು ರಾಜ್ಯ ಸರಕಾರ ಮತ್ತು ಸಿಬಿಐಗೆ ನೋಟೀಸ್ ಜಾರಿಗೊಳಿಸಿದ್ದಾರೆ. ಇದೇ ವೇಳೆ, ಧರ್ಮಸ್ಥಳದ ಅಸಹಜ ಸಾವುಗಳ ತನಿಖೆಯ ಸಲುವಾಗಿ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ಬಗ್ಗೆಯೂ ಕೋರ್ಟ್ ಗಮನಕ್ಕೆ ತಂದ ಅರ್ಜಿದಾರರ ವಕೀಲರು, ಅದರ ಮೂಲಕವೇ ಹೆಚ್ಚುವರಿ ತನಿಖೆ ಕೈಗೊಳ್ಳುವುದಕ್ಕೂ ಅವಕಾಶ ಇದೆಯೆಂದರು.
ಆದರೆ ಪ್ರತಿವಾದಿಗಳಿಂದ ವರದಿ ತರಿಸಿಕೊಂಡ ಬಳಿಕವೇ ಮುಂದಿನ ನಿರ್ಧಾರದ ಬಗ್ಗೆ ನಿರ್ಧರಿಸಬೇಕಾಗುತ್ತದೆ, ಈ ಹೊತ್ತಿನಲ್ಲಿ ಯಾರು ತನಿಖೆ ಮಾಡಬೇಕು ಎನ್ನುವ ಬಗ್ಗೆ ನಿರ್ಣಯಕ್ಕೆ ಬರಲಾಗದು ಎಂದು ಕೋರ್ಟ್ ಹೇಳಿತು. ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ಸೌಜನ್ಯಾಳನ್ನು 2012ರ ಅಕ್ಟೋಬರ್ 9ರಂದು ಸಂಜೆಯ ವೇಳೆಗೆ ಬಸ್ಸಿನಿಂದ ಇಳಿದು ಹೋಗುತ್ತಿದ್ದಾಗ ಅಪಹರಿಸಿದ್ದ ತಂಡವೊಂದು ಆಕೆಯನ್ನು ಭೀಭತ್ಸವಾಗಿ ಅತ್ಯಾಚಾರಗೈದು ಮರುದಿನ ಬೆಳಗ್ಗೆ ಅಲ್ಲಿಯೇ ಪರಿಸರದ ಕಾಡಿನಲ್ಲಿ ಎಸೆದಿತ್ತು. ಈ ಘಟನೆ ಧರ್ಮಸ್ಥಳದಲ್ಲಿ ಜನಾಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು.
ಆನಂತರ ಸಿಐಡಿ, ಆಬಳಿಕ ಸಿಬಿಐ ತನಿಖೆ ನಡೆದರೂ ಸತ್ಯಾಂಶ ಹೊರಬಂದಿಲ್ಲ ಎನ್ನುವ ನೆಲೆಯಲ್ಲಿ ನಿರಂತರ ಹೋರಾಟ ನಡೆಸಲಾಗುತ್ತಿದೆ. ಈ ನಡುವೆ, ಸಂತೋಷ್ ರಾವ್ ಕೃತ್ಯ ಎಸಗಿದ ಆರೋಪಿಯೆಂದು ಸ್ಥಳೀಯ ಪೊಲೀಸರು ಬಂಧಿಸಿದ್ದ ವ್ಯಕ್ತಿಯನ್ನು ಸಿಬಿಐ ನ್ಯಾಯಾಲಯ ಸಾಕ್ಷ್ಯಗಳ ಕೊರತೆಯಿಂದ 2022ರಲ್ಲಿ ಏಳು ವರ್ಷಗಳ ಜೈಲುವಾಸದ ಬಳಿಕ ಬಿಡುಗಡೆ ಮಾಡಿತ್ತು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm